ಪ್ರಮುಖ ಸುದ್ದಿಮೈಸೂರು

ಅಕ್ಷರಜಾತ್ರೆಗೆ ಮೊದಲಹೆಜ್ಜೆಯಾಗಿ ದ್ವಜಾರೋಹಣ ನೆರವೇರಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು,ನ.24:-ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಜಾತ್ರೆಗೆ ಮೊದಲಹೆಜ್ಜೆಯಾಗಿ ರಾಷ್ಟ್ರದ್ವಜಾರೋಹಣ ನೆರವೇರಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ದ್ವಜಾರೋಹಣ ನೆರವೇರಿಸಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ದೇಶ ಸಂವಿಧಾನ ಹಾಗೂ ಕನ್ನಡನಾಡಿನ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಂಕಣಬದ್ಧರಾಗಿ ದುಡಿಯಬೇಕಿದೆ. ಕನ್ನಡನಾಡಿನ ಜನರೆಲ್ಲರೂ ಏಕಧ್ವನಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಬೇಕಿದೆ. ದೇಶದ ಅಭಿವೃದ್ಧಿಯಲ್ಲಿ ಕನ್ನಡ ನಾಡಿನ ಕೊಡುಗೆ ಅಪಾರವಾಗಿದ್ದು, ನಾಡ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಸಾಹಿತ್ಯ ಸಮ್ಮೇಳನವನ್ನು ಮೈಸೂರಿನಲ್ಲಿ ಅದ್ಧೂರಿಯಾಗಿ ಆಚರಿಸಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸನ್ನು ಎಲ್ಲ ಸಾಹಿತ್ಯಾಸಕ್ತರು, ಕನ್ನಡ ಅಭಿಮಾನಿಗಳು ಬೆಂಬಲಿಸಿದ್ದಾರೆ. ನಾನು 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷನಾಗುವುದರ ಜೊತೆಗೆ ಶ್ರವಣಬೆಳಗೊಳ ಮತ್ತು ಮಡಿಕೇರಿಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿದ್ದು ಅತ್ಯಂತ ಹೆಮ್ಮೆಯ ವಿಷಯ. ಇದು ಆ ತಾಯಿ ಭುವನೇಶ್ವರಿಯ ಕೃಪೆಯಾಗಿದ್ದು, ಇದು ನನಗೆ ಸಂತಸ ತಂದಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲ ಕನ್ನಡಿಗರು ಭಾಗವಹಿಸಿ ಯಶಸ್ವಿ ಗೊಳಿಸಬೇಕು. ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಎತ್ತಿಹಿಡಿಯಬೇಕು ಎಂದು ತಿಳಿಸಿದರು

ಕನ್ನಡ ಸಾಹಿತ್ಯ ಪರಿಷತ್ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್ ನೆರವೇರಿಸಿದ್ದಾರೆ. ಮೈಸೂರು ಜಿಲ್ಲಾ ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ನಾಡಧ್ವಜಾರೋಹಣ ನೆರವೇರಿಸಿದ್ದು, ಕನ್ನಡ ಡಿಂಡಿಮ ಮೊಳಗಲು ಪ್ರಥಮ ಹೆಜ್ಜೆಗೆ ಚಾಲನೆ ನೀಡಿದರು. ಈ ಸಂದರ್ಭ ಸಮ್ಮೇಳನಾಧ್ಯಕ್ಷ ಪ್ರೊ. ಚಂದ್ರಶೇಖರ್ ಪಾಟೀಲ್, ಮೇಯರ್ ಎಂ.ಜೆ.ರವಿಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ ನಜೀರ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.    (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: