ಮೈಸೂರು

ಮನೆ ನಿರ್ಮಾಣ ಕಾಮಗಾರಿ ನಿರ್ಮಿತಿ ಕೇಂದ್ರಕ್ಕೆ ನೀಡಬೇಡಿ : ಡಾ.ವಿಶಾಲ್

ಪೌರ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳುವುದಾದರೆ ಅವರಿಗೆ ಆರ್ಥಿಕ ಧನಸಹಾಯ ನೀಡಿ ಆದರೆ ಯಾವುದೇ ಕಾರಣಕ್ಕೂ ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ನೀಡಬೇಡಿ ಎಂದು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಡಾ.ವಿಶಾಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರಿನ ಜಿಲ್ಲಾಪಂಚಾಯತ್ ಕಚೇರಿಯಲ್ಲಿ ಶನಿವಾರ ಪೌರಾಡಳಿತ ಅಧಿಕಾರಿಗಳ ಸಭೆ ನಡೆಯಿತು. ನವೆಂಬರ್ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆಸಲಿದ್ದು ಅದಕ್ಕೆ ಪೂರ್ವಭಾವಿಯಾಗಿ ಡಾ. ವಿಶಾಲ್ ಅವರು ವಸತಿಯೋಜನೆಗಳ ಕುರಿತು ಸಭೆ ನಡೆಸಿದರು.

ಪೌರಕಾರ್ಮಿಕರಿಗಾಗಿ ನಗರಪಾಲಿಕೆ, ನಗರಸಭೆ, ಪುರಸಭೆಗಳು ನಿರ್ಮಿಸಿರುವ ಮನೆಗಳ ಕುರಿತ ವಿಷಯವನ್ನೇ ಮುಖ್ಯವಿಚಾರವನ್ನಾಗಿ ಪರಿಗಣಿಸಿದ ಅವರು ಮನೆಗಳನ್ನು ನಿರ್ಮಿತಿ ಕೇಂದ್ರದವರಿಂದ ನಿರ್ಮಿಸದೇ ವಸತಿ ಇಲಾಖೆ ಅಥವಾ ರಾಜ್ಯ ಸರ್ಕಾರದ ಇಲಾಖೆಗಳ ಸಹಕಾರದಿಂದ ಮನೆ ನಿರ್ಮಿಸುವಂತೆ ಸಲಹೆ ನೀಡಿದರು. ರಾಜ್ಯ, ಕೇಂದ್ರ ಸರ್ಕಾರಗಳು ನೀಡುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ರೀತಿಯಲ್ಲಿ ಮನೆಗಳನ್ನು ನಿರ್ಮಿಸಿಕೊಡಿ ಎಂದರು.

ಕುಡಿಯುವ ನೀರು, ಸ್ವಚ್ಛತೆ, ರಸ್ತೆ, ಶುಚಿತ್ವದ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಭೆಯಲ್ಲಿ ಮೇಯರ್ ಬಿ.ಎಲ್.ಭಯರಪ್ಪ, ಜಿಲ್ಲಾಧಿಕಾರಿ ಡಿ.ರಂದೀಪ್, ನಗರಪಾಲಿಕೆ ಆಯುಕ್ತ ಜೆ.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: