ಪ್ರಮುಖ ಸುದ್ದಿಮೈಸೂರು

ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಎಬಿವಿಪಿ ಆಗ್ರಹ

ರಾಯಚೂರಿನಲ್ಲಿ ಸರ್ಕಾರಿ ಕಾರ್ಯಕ್ರಮವಾದ ಟಿಪ್ಪು ಜಯಂತಿ ವೇಳೆ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಇಲಾಖೆಗೆ ಕಪ್ಪುಚುಕ್ಕೆ  ತಂದಿದ್ದು ಈ ಕೂಡಲೇ ಸಂಪುಟದಿಂದ ವಜಾಗೊಳಿಸಬೇಕೆಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಅವರು ಶನಿವಾರ ಮಿನಿ ವಿಧಾನಸೌಧದ ಮುಂದೆ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆಯು ಮುಂದಿನ ಸಮಾಜ ನಿರ್ಮಾಣದ ನಿರ್ಮಾತೃಗಳನ್ನು ಸೃಷ್ಠಿಸುವ ಜವಾಬ್ದಾರಿಯುತ ಇಲಾಖೆ ಸಚಿವರೇ ಬೇಜಾವಾಬ್ದಾರಿಯುತ ನಡೆಯನ್ನು ಪ್ರದರ್ಶಿಸಿರುವುದು ಖಂಡನಾರ್ಹ, ಬಿಜೆಪಿಯ ಸಚಿವರು ಸದನದಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಪ್ರಕರಣದಿಂದ ತಕ್ಷಣವೇ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತನ್ವೀರ್ ಸೇಠ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಗರ ಕಾರ್ಯದರ್ಶಿ ಶರತ್, ಪದಾಧಿಕಾರಿಗಳಾದ ಶಿವಕುಮಾರ್, ಮಲ್ಲಪ್ಪ, ಮನು,ತೇಜಸ್, ಶ್ರೀನಿವಾಸ, ಸಂಜು ಶ್ರೀರಾಮ್ ಹಾಗೂ ಇತರರು ಪಾಲ್ಗೊಂಡಿದ್ದರು.

Leave a Reply

comments

Related Articles

error: