ಸುದ್ದಿ ಸಂಕ್ಷಿಪ್ತ

ದಾರಿ ಬಿಟ್ಟಿಲ್ಲವೆಂಬ ಕಾರಣಕ್ಕೆ ಚಾಲಕನ ಮೇಲೆ ಹಲ್ಲೆ

ವಾಹನ ಚಲಿಸುತ್ತಿದ್ದಾಗ ದಾರಿ ಬಿಟ್ಟಿಲ್ಲವೆಂಬ ಕಾರಣಕ್ಕೆ ಕಾರು ಚಾಲಕನೋರ್ವ ರಾಜ್ಯ ರಸ್ತೆ ಸಾರಿಗೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮೈಸೂರಿನಲ್ಲಿ ಶನಿವಾರ ನಡೆದಿದೆ.

ರಾಜ್ಯ ರಸ್ತೆ ಸಾರಿಗೆ ಚಾಲಕ ಷಣ್ಮುಗಪ್ಪ ಎಂಬವರೇ ಹಲ್ಲೆಗೊಳಗಾದ ವ್ಯಕ್ತಿ. ಅವರು ಎಂದಿನಂತೆ ನಗರ ಬಸ್ ನಿಲ್ದಾಣದಿಂದ ಶ್ರೀರಂಗಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬನ್ನಿಮಂಟಪದ ಸಂತಫಿಲೋಮಿನಾ ಕಾಲೇಜು ರಸ್ತೆಯ ಬಳಿ ಎದುರಾದ ವ್ಯಾಗನರ್ ಕಾರು ಚಾಲಕ ಏಕಾಏಕಿ ಬಸ್ ಗೆ ಅಡ್ಡಲಾಗಿ ಕಾರು ನಿಲ್ಲಿಸಿ, ಬಸ್ಸಿನೊಳಗೆ ತೆರಳಿ ಸಾರಿಗೆ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಸ್ ಕೀ ಯನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನೆಯಿಂದ ಬಸ್ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ತೀವ್ರಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್.ಆರ್.ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಘಟನೆಯಿಂದ ಕೆಲಕಾಲ ಬಸ್ ನಲ್ಲಿದ್ದ ಪ್ರಯಾಣಿಕರು ಪರದಾಡುವಂತಾಯಿತು.

Leave a Reply

comments

Related Articles

error: