ಕರ್ನಾಟಕಪ್ರಮುಖ ಸುದ್ದಿ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜ್ವಲ್ ರೇವಣ್ಣ ನೇಮಕ

ರಾಜ್ಯ(ಬೆಂಗಳೂರು)ನ.27:- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜ್ವಲ್ ರೇವಣ್ಣ ಅವರನ್ನು  ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮಾಜಿ  ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ನಲ್ಲಿ ಪದಾಧಿಕಾರಿ ಹುದ್ದೆ ನೀಡಲಾಗಿದೆ. ಇದೇ ಮೊದಲ ಬಾರಿಗೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಿಲಾಗಿದ್ದು, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಹಿಂದಿನಿಂದಲೂ ಪ್ರಜ್ವಲ್ ರೇವಣ್ಣ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಒತ್ತಡ ಹೇರುತ್ತಾ ಬರುತ್ತಿದ್ದರು. ಇದೀಗ ಅವರಿಗೆ ಮೊದಲ ಬಾರಿಗೆ ಪಕ್ಷದ ಪದಾಧಿಕಾರಿ ಸ್ಥಾನ ನೀಡಲಾಗಿದೆ. ಈ ಮೂಲಕ ಅಧಿಕೃತವಾಗಿ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಈ ಮೂಲಕ ಚುನಾವಣೆ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಗೌಡರ ಕುಟುಂಬದಲ್ಲಿ ಎದ್ದಿದ್ದ ಅಸಮಾಧಾನದ ಹೊಗೆಯನ್ನು ಸರಿಪಡಿಸಲು ಗೌಡರು ಈ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: