ಕ್ರೀಡೆಪ್ರಮುಖ ಸುದ್ದಿ

ಲಂಕಾ-ಭಾರತ ನಡುವಿನ 2ನೇ ಟೆಸ್ಟ್: ಭಾರತಕ್ಕೆ ಇನ್ನಿಂಗ್ಸ್ ಹಾಗೂ 239 ರನ್ ಗಳ ಭರ್ಜರಿ ಜಯ

ನಾಗ್ಪುರ,ನ.27-ಇಲ್ಲಿನ ವಿದರ್ಭ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ಹಾಗೂ ಭಾರತದ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನ್ನಿಂಗ್ಸ್ ಹಾಗೂ 239 ರನ್ ಗಳಿಂದ ಭರ್ಜರಿ ಜಯಗಳಿಸಿದೆ.

ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಲಂಕಾ ತಂಡವನ್ನು 166 ರನ್ ಗಳಿಗೆ ಆಲೌಟ್ ಮಾಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಲಂಕಾ ಪಡೆ ಮೊದಲ ಇನ್ನಿಂಗ್ಸ್ ನಲ್ಲಿ 205 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ್ದ ಭಾರತ 610 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು 405 ರನ್ ಮುನ್ನಡೆ ಸಾಧಿಸಿತ್ತು.

ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ ಶ್ರೀಲಂಕಾಗೆ ಸಮರ ವಿಕ್ರಮಾ ಡಕ್ಔಟ್ ಆಗಿ ಪೆವಿಲಿಯನ್ ಸೇರಿದ್ದರಿಂದ ಆರಂಭಿಕ ಆಘಾತವಾಯಿತು. ನಾಲ್ಕನೇ ದಿನದಾಟವನ್ನು ಪ್ರಾರಂಭಿಸಿದ ಕರುಣರತ್ನೆ 18 ಹಾಗೂ ತಿರಿಮನ್ನೆ 23 ರನ್ ಗಳಿಸಿ ಔಟಾದರು. ಭಾರತೀಯ ಬೌಲರ್ ಗಳ ಮಾರಕ ದಾಳಿಗೆ ಲಂಕಾ ಆಟಗಾರರು ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಚಾಂಡಿಮಲ್ 61 ರನ್ ಗಳಿಸಿದ್ದನ್ನು ಬಿಟ್ಟರೆ ಮತ್ಯಾವ ಆಟಗಾರರು ಉತ್ತಮ ಆಟಪ್ರದರ್ಶಿಸಲಿಲ್ಲ.

ಭಾರತ ಪರ ಮೊದಲ ಇನ್ನಿಂಗ್ಸ್ ನಲ್ಲಿ ಕೆಎಲ್ ರಾಹುಲ್ 7, ಮುರಳಿ ವಿಜಯ್ 128, ಚೇತೇಶ್ವರ ಪೂಜಾರ 143, ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 213 ಹಾಗೂ ರೋಹಿತ್ ಶರ್ಮಾ ಅಜೇಯ 102 ರನ್ ಗಳಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ಪೆರೆರಾ 3, ಘಮಗೆ, ಹೆರಾತ್, ಶನಕ ತಲಾ 1 ವಿಕೆಟ್ ಪಡೆದಿದ್ದಾರೆ.

ಲಂಕಾ ಪರ ಲಂಕಾ ಪರ ಮೊದಲ ಇನ್ನಿಂಗ್ಸ್ ನಲ್ಲಿ ಕರುಣರತ್ನೆ 51, ಚಾಂಡಿಮಲ್ 57, ಡಿಕ್ಲೆಲ್ಲಾ 24 ಹಾಗೂ ಪೆರೆರಾ 15 ರನ್ ಗಳಿಸಿ ಔಟಾಗಿದ್ದಾರೆ. ಭಾರತ ಪರ ಆರ್ ಅಶ್ವಿನ್ 4, ಇಶಾಂತ್ ಶರ್ಮಾ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದಿದ್ದಾರೆ.

ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಕೊಲ್ಕತ್ತಾದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. (ವರದಿ-ಎಂ.ಎನ್)

Leave a Reply

comments

Related Articles

error: