ಮೈಸೂರು

ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನು ಅತ್ಯವಶ್ಯಕ : ಸಿ.ಜಿ.ಮಹಮದ್ ಮುಜೀರುಲ್ಲಾ

ಮೈಸೂರು, ನ.27:-  ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನು ಅತ್ಯವಶ್ಯಕವಾಗಿದ್ದು, ದೇಶಕ್ಕೆ ಕಾನೂನು ರಕ್ಷಾಬಂಧನದಂತೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ಮಹಮದ್ ಮುಜೀರುಲ್ಲಾ ಅಭಿಪ್ರಾಯಪಟ್ಟರು.

ಅವರು ಸೋಮವಾರ ಕುವೆಂಪುನಗರದಲ್ಲಿರುವ  ಜೆಎಸ್‍ಎಸ್ ಕಾನೂನು ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜೆಎಸ್ ಎಸ್ ಕಾನೂನು ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕಾನೂನು ದಿನ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ದೇಶದ ಉದ್ದಗಲಕ್ಕೂ ಇರುವ ನ್ಯಾಯವಾದಿಗಳು, ನ್ಯಾಯಾಧೀಶರು, ಕಾನೂನು ಪಂಡಿತರು, ಕಾನೂನು ವಿದ್ಯಾರ್ಥಿಗಳನ್ನು ಒಳಗೊಂಡಂತೆ ನ್ಯಾಯಾಂಗಕ್ಕೆ ಸಂಬಂಧಿಸಿದ ಪ್ರತಿಯೊಬ್ಬರೂ ಕಾನೂನು ದಿನವನ್ನು ಆಚರಿಸುತ್ತಾರೆ. ಹಾಗಾಗಿ ಕಾನೂನು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಬಹಳ ಅವಶ್ಯಕವಾಗಿ ಇರುವುದರಿಂದ ಅದು ರಕ್ಷಾಬಂಧನ ಇದ್ದಂತೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಸತ್ರ ಹಾಗೂ ಸೆಷನ್ಸ್ ನ್ಯಾಯಾಧೀಶ ಪಿ.ಜಿ.ಎಂ. ಪಾಟೀಲ್ ಮಾತನಾಡಿ, ಭಾರತದ ಸಂವಿಧಾನ ಶಿಲ್ಪಿ ಎಂದೇ ಕರೆಯಲ್ಪಡುವ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಭಾರತ ಸಂವಿಧಾನವನ್ನು ದೇಶದ ಸಂವಿಧಾನವೆಂದು ಕೇಂದ್ರ ಸರ್ಕಾರವು 1949ರ ನ.26ರಂದು ಘೋಷಿಸಿದ್ದ ಹಿನ್ನೆಲೆಯಲ್ಲಿ ಆ ದಿನವನ್ನು ಭಾರತೀಯರಾದ ನಾವೆಲ್ಲರೂ ಮರೆಯಲಾಗದ ದಿನವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಡಾ.ಸಿ.ಕೆ.ಎನ್. ರಾಜ ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಜಿ.ಬಸವರಾಜ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ವಿ.ರಾಮಮೂರ್ತಿ, ಜೆಎಸ್‍ಎಸ್ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಎಂ.ಪ್ರಭುಸ್ವಾಮಿ, ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಕೆ.ಎಸ್.ಸುರೇಶ್ ಹಾಗೂ ಕಾನೂನು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: