ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು, ನ.27:-  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ. ರಾಜೀವ್‍ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ನವೆಂಬರ್ 29 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಾರಾಯಣ ಹೃದಯಾಲಯ, ರಾಜೀವ್‍ನಗರ 2ನೇ ಹಂತ, ಅಲ್ಬದರ್ ಮಸೀದಿ, ಸೂರ್ಯನಾರಾಯಣ ದೇವಸ್ಥಾನ, ಕ್ರಿಶ್ಚಿಯನ್ ಕಾಲೋನಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು ವಿದ್ಯುತ್ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: