ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ಜೆಡಿಯು ಅಧ್ಯಕ್ಷರಾಗಿ ಜೆ.ಎಚ್ ಪಟೇಲರ ಪುತ್ರ ಮಹಿಮಾ ಪಟೇಲ್ ನೇಮಕ

ಬೆಂಗಳೂರು (ನ.28): ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲ್ ಅವರ ಪುತ್ರ, ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಹಿಮಾ ಪಟೇಲ್ ಅವರು ಈಗ ರಾಜ್ಯ ಸಂಯುಕ್ತ ಜನತಾದಳದ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಮಹಿಮಾ ಅವರು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮ್ಮುಖದಲ್ಲಿ ನ.18ರಂದು ಜೆಡಿಯು ಸೇರಿದ್ದರು. ಮೊದಲು ಕಾಂಗ್ರೆಸ್ ಸೇರಿದ್ದ ಮಹಿಮಾ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡದ ಕಾರಣ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರು ಮಹಿಮಾ ಅವರನ್ನು ಜೆಡಿಯು ಕರ್ನಾಟಕ ಘಟಕದ ಅಧ್ಯಕ್ಷರಾಗಿ ನೇಮಿಸಿದ್ದಾರೆ. ನವೆಂಬರ್ 30ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಶಿರೋಮಣಿ ಡಾ.ವರದರಾಜ್ ಕಲಾ ಮಂದಿರದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಿಳಿದುಬಂದಿದೆ.

ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಅವರು ಕೈಗೊಂಡ ಕ್ರಮವನ್ನು ಮೆಚ್ಚಿ ಜೆಡಿಯು ಸೇರುತ್ತಿದ್ದೇನೆ ಎಂದು ಹೇಳಿರುವ ಮಹಿಮಾ ಅವರು ತಮ್ಮ ತಂದೆ ಹಾಕಿಕೊಟ್ಟ ಸಮಾಜವಾದದ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: