ಕರ್ನಾಟಕಪ್ರಮುಖ ಸುದ್ದಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು (ನ.28): ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವಿವಿಧ ಚಟುವಟಿಕೆಗಳನ್ನು ಗಣಕೀಕರಣಗೊಳಿಸುವ ನಿಟ್ಟಿನಲ್ಲಿ ಮೊದಲು ಹಂತವಾಗಿ ವಿದ್ಯಾರ್ಥಿಗಳ ನೋಂದಣಿ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಓ.ಎಂ.ಆರ್. ಬಳಸಿ ಮಾಡುವ ಬದಲು ಎಸ್.ಎ.ಟಿ.ಎಸ್. ಆಧಾರಿತ ಮಕ್ಕಳ ಮಾಹಿತಿಯೊಂದಿಗೆ ಹೆಚ್ಚುವರಿ ಮಾಹಿತಿ ಸಂಗ್ರಹಿಸಿ ತಯಾರಿಸಲು ನಿರ್ಧರಿಸಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯಲ್ಲಿ ಮಾರ್ಚ್, ಏಪ್ರಿಲ್-2018 ರ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF) ಮತ್ತು ಮಾರ್ಚ್, ಏಪ್ರಿಲ್-2018 ನೇ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯಲು ನೋಂದಾಯಿಸಿದ ಖಾಸಗಿ ಅಭ್ಯರ್ಥಿಗಳ (CCERF) ವಿವರಗಳನ್ನು ಆನ್‍ಲೈನ್ (SATS) ಮೂಲಕ ಆಪ್‍ಲೋಡ್ ಮಾಡುವಂತೆ ಈಗಾಗಲೇ ತಿಳಿಸಲಾಗಿದೆ.

ಈ ಸಂಬಂಧ ಆನ್‍ಲೈನ್‍ನಲ್ಲಿ ನೋಂದಣಿ ಮಾಡಲು ಶಾಲಾ ಮುಖ್ಯ ಶಿಕ್ಷಕರುಗಳ ಅನುಕೂಲಕ್ಕಾಗಿ ಮಂಡಳಿಯಲ್ಲಿ ನ.28 ರಿಂದ ಸಹಾಯವಾಣಿ (Helpline)  ಕೇಂದ್ರವನ್ನು ಸ್ಥಾಪಿಸಲಾಗಿರುತ್ತದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದೆ. ಇದಕ್ಕಾಗಿ ದೂರವಾಣಿ ಸಂಖ್ಯೆ 080-23310075, 080-2331076 ಮೀಸಲಿಡಲಾಗಿದೆ. ಈ “ಸಹಾಯವಾಣಿ”ಯು ನ.28 ರಿಂದ ಪ್ರತಿ ದಿನ ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.

(ಎನ್‍ಬಿಎನ್‍)

Leave a Reply

comments

Related Articles

error: