ಪ್ರಮುಖ ಸುದ್ದಿಮೈಸೂರು

ಮೋದಿ ಹವಾ ಕಡಿಮೆಯಾಗುತ್ತಿದ್ದು ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ನ.29:-  ದೇಶದಲ್ಲಿ ಪ್ರಧಾನಿ ಮೋದಿ ಹವಾ ದಿನೇ ದಿನೇ ಕಡಿಮೆಯಾಗುತ್ತಿದೆ. ಹಾಗಾಗಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಈ ಕುರಿತು ಇತ್ತೀಚಿನ ಚುನಾವಣಾ ಸಮೀಕ್ಷೆಗಳಿಂದಲೂ ತಿಳಿದುಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಈ ಬಾರಿ ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು. ಹಾಲಿ ಶಾಸಕರಿಗೆ ಟಿಕೇಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಕ್ಷೇತ್ರದ ಜನರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಮೇರೆಗೆ ಸಮರ್ಥರಿಗೆ ಟಿಕೇಟ್ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಯಾರು ಸಮರ್ಥರಿದ್ದಾರೋ ಅವರಿಗೆ ಪಕ್ಷದ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರ ಅಭಿಪ್ರಾಯ ಪಡೆದು ಟಿಕೇಟ್ ನೀಡುತ್ತೇವೆ ಎಂದರು.

ವಿಜಯ್ ಶಂಕರ್ ಪಕ್ಷಕ್ಕೆ ಬಂದರೇ ಸ್ವಾಗತ

ಈಗಾಗಲೇ ಬಿಜೆಪಿ ತೊರೆದಿರುವ  ಮಾಜಿಸಚಿವ ವಿಜಯ್ ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಬಂದರೇ ಸಂತಸ.ಪಕ್ಷದಲ್ಲಿ ಅವರಿಗೆ ಸ್ವಾಗತವಿದೆ. ಆದರೆ ಈವರೆಗೆ ಅವರ ಜತೆ ನಾನು ನೇರವಾಗಿ ಮಾತನಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: