ಮೈಸೂರು

ಜೆಡಿಎಸ್ ಪಕ್ಷದ ವರಿಷ್ಠರಿಂದ ಟಿಕೆಟ್ ಭರವಸೆ : ಎಂ.ಮಹದೇವಸ್ವಾಮಿ

ಮೈಸೂರು, ನ. 29 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿ.ನರಸೀಪುರ ಕ್ಷೇತ್ರದಿಂದ  ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಪಕ್ಷದ ವರಿಷ್ಠರಾದ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ ಎಂದು ಜೆಡಿಎಸ್ ಪರಿಶಿಷ್ಠ ಜಾತಿ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಮಹದೇವ ಸ್ವಾಮಿ(ಚಿದರವಳ್ಳಿ) ತಿಳಿಸಿದರು.

ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಶಾಸಕ ಹಾಗೂ ಸಚಿವರಾದ ಕಾಂಗ್ರೆಸ್ ನಾಯಕರಿಂದ ಕ್ಷೇತ್ರದ ಅಭಿವೃದ್ಧಿ ಶೂನ್ಯವಾಗಿದೆ. ಈ ಹಿನ್ನಲೆಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಸ್ಥಳೀಯರಿಗೆ ಅವಕಾಶ ನೀಡಬೇಕು. ಈ ಬಗ್ಗೆ ಪಕ್ಷದ ವರಿಷ್ಠರು ಟಿಕೆಟ್ ನೀಡುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಉಸ್ತುವಾರಿ ಸಚಿವರು ಪ್ರವಾಸಿತಾಣ ತಲಕಾಡು ಕ್ಷೇತ್ರ ಅಭಿವೃದ್ಧಿಯಲ್ಲಿ ತೀವ್ರ ನಿರ್ಲಕ್ಷ್ಯ ತೋರಿದ್ದು ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ, ಕ್ಷೇತ್ರದಲ್ಲಿ ಇಂದಿಗೂ  ಹಲವಾರು ಜ್ವಲಂತ ಸಮಸ್ಯೆಗಳು ತಾಂಡವಾಡುತ್ತಿದ್ದು ಜನಪ್ರತಿನಿಧಿಗಳು ಸ್ಥಳೀಯ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.

ಸ್ಥಳೀಯ ಹೋರಾಟಗಳಿಗೆ ಬೆನ್ನೆಲು ಬಾಗುವೆ, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕ್ಷೇತ್ರದ ಸರ್ವಾಗೀಣಾಭಿವೃದ್ಧಿಗೆ ಶ್ರಮಿಸುವೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಜಗದೀಶ್, ರಮೇಶ್ ರವಿ ಸೋಸಲೆ ಮೊದಲಾದವರು ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: