ಕರ್ನಾಟಕ

ಡಿ.23: ವಿಶ್ವ ರೈತ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ; ಕೆ.ಎಸ್.ಪುಟ್ಟಣ್ಣಯ್ಯ

ರಾಜ್ಯ(ಮಂಡ್ಯ)ನ.29:- ಡಿಸೆಂಬರ್ 23ರಂದು ನಡೆಯುವ ವಿಶ್ವ ರೈತ ದಿನಾಚರಣೆ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯನವರ ಹುಟ್ಟುಹಬ್ಬದ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಕಾರ್ಯಕರ್ತರ ಸಭೆ ನಡೆಸಿದರು.

ಪಾಂಡವಪುರ ಕ್ಯಾತನಹಳ್ಳಿ ಗ್ರಾಮದ ರೈಸ್‍ಮಿಲ್ ಆವರಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅಂದು ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಕಾರ್ಯಕರ್ತರು ಹಾಗೂ ಮಹಿಳೆಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಮಾಡಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ, ಪಟ್ಟಣದಲ್ಲಿ ಡಿ.23ರಂದು ವಿಶ್ವ ರೈತ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಇದೇ ಕಾರ್ಯಕ್ರಮದಲ್ಲಿ ಕಳೆದ ನಾಲ್ಕುವರೆ ವರ್ಷದ ಸಾಧನೆಯ ಕಿರುಹೊತ್ತಿಗೆ ಹಾಗೂ ಕೈಪಿಡಿಯನ್ನು ಸಹ ಬಿಡುಗಡೆಗೊಳಿಸಲಾಗುತ್ತಿದೆ. ಹಾಗಾಗಿ ಈ ಕಾರ್ಯಕ್ರಮಕ್ಕೆ ತಾಲೂಕಿನಾದ್ಯಂತ ರೈತರು, ರೈತಸಂಘದ ಕಾರ್ಯಕರ್ತರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪ್ರತಿ ಗ್ರಾಪಂನಿಂದ ಕನಿಷ್ಠ ಒಂದುಸಾವಿರ ಜನರನ್ನು ಕಾರ್ಯಕ್ರಮಕ್ಕೆ ಕರೆತರುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯಮಾಡಬಾರದು ಎಂದು ಕಾರ್ಯಕರ್ತರಿಗೆ ಸೂಚಿಸಿದರು.

ಸಭೆಯಲ್ಲಿ ರೈತಸಂಘದ ತಾ.ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಜಿಲ್ಲಾಧ್ಯಕ್ಷ ಸುರೇಶ್, ನರಸರಾಜು, ಪಚ್ಚೆನಂಜುಂಡಸ್ವಾಮಿ, ತಾಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ, ಮಾಜಿ ಸದಸ್ಯ ಸ್ವಾಮೀಗೌಡ, ಗೋವಿಂದೇಗೌಡ, ಎಚ್.ಕೃಷ್ಣೇಗೌಡ(ಕಿಟ್ಟಿ), ಮಹಿಳಾ ಘಟಕದ ಅಧ್ಯಕ್ಷೆ ಕೋಕಿಲಾಜ್ಞಾನೇಶ್, ಪಿಎಸ್‍ಎಸ್‍ಕೆ ಉಪಾಧ್ಯಕ್ಷ ಪ್ರಕಾಶ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: