ಕರ್ನಾಟಕಪ್ರಮುಖ ಸುದ್ದಿ

ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತನ ಬರ್ಬರ ಹತ್ಯೆ

ರಾಜ್ಯ(ಮಂಡ್ಯ)ನ.29:- ಜೆಡಿಎಸ್  ಕಾರ್ಯಕರ್ತನೋರ್ವ ಬರ್ಬರವಾಗಿ ಕೊಲೆಯಾಗಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದ ಬಳಿ ಕೊಲೆ‌ ನಡೆದಿದ್ದು , ಕೆ.ಮಲ್ಲಿಗೆರೆ ಗ್ರಾಮದ ಸಂತೋಷ್ ಕುಮಾರ್ ಎಂಬಾತನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಗೈದು ಪರಾರಿಯಾಗಿದೆ. ಇತ್ತೀಚೆಗಷ್ಟೆ ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡರ ಜೊತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಸಂತೋಷ್  ಸುರೇಶ್ ಗೌಡ  ಕಟ್ಟಾ ಬೆಂಬಲಿಗನಾಗಿದ್ದ. ಇಂದು ಮಧ್ಯಾಹ್ನ ಗ್ರಾಮದ ಸಮೀಪವಿರೋ ಜಮೀನಿಗೆ ತೆರಳುತ್ತಿದ್ದ ವೇಳೆ ಈತನನ್ನು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿ ಗಳ ತಂಡ ಕೊಲೆ ಮಾಡಿ ಪರಾರಿಯಾಗಿದೆ. ಬರ್ಬರವಾಗಿ ತಮ್ಮೂರಿನ ಯುವಕ ಹತ್ಯೆಯಾದ ಸುದ್ದಿ ತಿಳಿದು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್ಪಿ ಸೇರಿದಂತೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು  ಇದು ರಾಜಕೀಯ ಪ್ರೇರಿತ ಕೊಲೆಯೋ ಇಲ್ಲ ವೈಯುಕ್ತಿಕ ದ್ವೇಷಕ್ಕಾಗಿ ಮಾಡಿರೋ  ಕೊಲೆಯೋ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದು, ಕೊಲೆ ಮಾಡಿ ಪರಾರಿಯಾಗಿರೋ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಸದ್ಯ ಮೃತನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ‌ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ತರಲಾಗಿದ್ದು , ಪೊಲೀಸರು ತನಿಖೆ‌ ಮುಂದುವರೆಸಿದ್ದಾರೆ.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: