ಪ್ರಮುಖ ಸುದ್ದಿಮೈಸೂರು

ಬಿಜೆಪಿ ತೊರೆದಿರುವ ಸಿಎಚ್ ವಿಜಯ ಶಂಕರ್ ಜೊತೆ ಕಾಂಗ್ರೆಸ್ ಮುಖಂಡರ ಮಾತುಕತೆ

ಮೈಸೂರು (ನ.29): ಬಿಜೆಪಿ ತೊರೆದಿರುವ ಮಾಜಿ ಸಚಿವ ಸಿ.ಎಚ್.ವಿಜಯ ಶಂಕರ್ ಅವರ ಜೊತೆ ಕಾಂಗ್ರೆಸ್ ಮುಖಂಡರು ಚರ್ಚೆ ನಡೆಸಿದ್ದು, ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ.

ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಪಕ್ಷ ತೊರೆರುವ ವಿಜಯಶಂಕರ್ ಅವರ ನಿವಾಸಕ್ಕೆ ಭೇಟಿ ನೀಡಿದ ಚಾಮರಾಜನಗರ ಸಂಸದ ಆರ್.ಧ್ರುವನಾರಾಯಣ ಮತ್ತು ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಅವರು ಮಾತುಕತೆ ನಡೆಸಿದರು. ಬೆಂಬಲಿಗರ ಜೊತೆ ಮಾತುಕತೆ ನಡೆಸಿ ಕಾಂಗ್ರೆಸ್ ಪಕ್ಷ ಸೇರುವ ಕುರಿತು ಅಧಿಕೃತವಾಗಿ ತೀರ್ಮಾನ ಪ್ರಕಟಿಸುವುದಾಗಿ ವಿಜಯ ಶಂಕರ್ ತಿಳಿಸಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ಅವರ ಜೊತೆ ದೂರವಾಣಿ ಮೂಲಕ ಸಿ.ಎಚ್.ವಿಜಯ ಶಂಕರ್ ಮಾತುಕತೆ ನಡೆಸಿದ ನಂತರ ಸಿದ್ದರಾಮಯ್ಯ ಅವರ ಸೂಚನೆಯಂತೆಯೇ ಧೃವನಾರಾಯಣ  ಅವರು ವಿಜಯಶಂಕರ್ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಭೇಟಿಯ ಬಳಿಕ ಮಾತನಾಡಿರುವ ಸಂದದ ಆರ್.ಧ್ರುವ ನಾರಾಯಣ ಅವರು, ವಿಜಯ ಶಂಕರ್ ಅವರು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಬೇಕು. ಮುಂದಿನ ದಿನಗಳಲ್ಲಿ ಅವರಿಗೆ ಉತ್ತಮವಾದ ಸ್ಥಾನಮಾನ ದೊರೆಯಲಿದೆ. ವಿಜಯ ಶಂಕರ್ ಅವರು ಪಕ್ಷ ಸೇರಿದರೆ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲವರ್ಧನೆಗೊಳ್ಳಲಿದೆ. ಅವರ ಸೇರ್ಪಡೆಗೆ ಯಾರಿಂದಲೂ ವಿರೋಧವಿಲ್ಲ ಎಂದು ಹೇಳಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: