ಮೈಸೂರು

ಪೊಲೀಸ್ ಕರ್ತವ್ಯ ಕೂಟದಲ್ಲಿ ಮಂಡ್ಯ ಜಿಲ್ಲೆಯ ತಂಡಕ್ಕೆ ಸರ್ವೋತ್ತಮ ಪ್ರಶಸ್ತಿ

ಮೈಸೂರು,ನ.30:- ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಎರಡು ದಿನಗಳ ಕಾಲ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಮಂಡ್ಯ ಜಿಲ್ಲೆಯ ತಂಡಕ್ಕೆ ಸರ್ವೋತ್ತಮ ಪ್ರಶಸ್ತಿ ಲಭಿಸಿದೆ.

ದಕ್ಷಿಣ ವಲಯದ ಐದು ಜಿಲ್ಲೆಗಳಾದ ಮೈಸೂರು,ಕೊಡಗು, ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಯ 160ಪೊಲೀಸರು ಹಾಗೂ 16ಶ್ವಾನಗಳು ಭಾಗವಹಿಸಿದ್ದು, 19ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಮಂಡ್ಯ ಜಿಲ್ಲೆ 17, ಮೈಸೂರು ನಗರ ಪೊಲೀಸ್ ಕಮಿಷನರೇಟ್ 11, ಕೊಡಗು 9, ಚಾಮರಾಜನಗರ 8, ಹಾಸನ ಹಾಗೂ ಮೈಸೂರು ತಲಾ 7 ಪದಕಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಚಾಮರಾಜನಗರದ ಪೊಲೀಸ್ ಇನ್ಸಪೆಕ್ಟರ್ ಕೆ.ಷಣ್ಮುಗ ವರ್ಮಾ ಅತಿ ಹೆಚ್ಚು ಪದಕಗಳನ್ನು ಪಡೆದುಕೊಂಡಿದ್ದಾರೆ. ಇಲ್ಲಿ ಆಯ್ಕೆಯಾದವರು ಡಿಸೆಂಬರ್ ನಲ್ಲಿ ನಡೆಯುವ ರಾಜ್ಯಮಟ್ಟದ ಹಾಗೂ ಜನವರಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜೇತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಬಹುಮಾನ ವಿತರಿಸಿದರು.ಈ ಸಂದರ್ಭ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್,ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: