ಮೈಸೂರು

ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲವು ರಸ್ತೆಗಳಲ್ಲಿ ಮೆರವಣಿಗೆ ನಿರ್ಬಂಧ : ಡಿ.ರಂದೀಪ್

ಮೈಸೂರು,ನ.30:- ಡಿ.3ರಂದು ಹನುಮಜಯಂತಿ ಹಾಗೂ ಡಿ.2ರಂದು ನಗರದಲ್ಲಿ ನಡೆಯಲಿರುವ ಈದ್ ಮಿಲಾದ್ ಆಚರಣೆ ಅಂಗವಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲವು ರಸ್ತೆಗಳಲ್ಲಿ ಮೆರವಣಿಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದರು.

ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಹುಣಸೂರು ಮೂರು ವರ್ಷದಿಂದ ಅತಿಸೂಕ್ಷ್ಮ ಪ್ರದೇಶವಾಗಿದೆ. ಜಿಲ್ಲಾಡಳಿತ ಶಾಂತಿ ಸುವ್ಯವಸ್ಥೆಗಾಗಿ ಕೆಲವು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು. ಹನುಮ ಜಯಂತಿ, ಈದ್ ಮಿಲಾದ್ ಅಚರಣೆ ಎರಡೂ ಒಟ್ಟಿಗೆ ಬಂದಿದ್ದು, ನ.30ರಿಂದಲೇ ಪೊಲೀಸರು ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಹನುಮಜಯಂತಿ ಸಮಿತಿ ಕಾನೂನು ಸಲಹೆಗಾರ ಬಿ.ಎಸ್.ಯೋಗಾನಂದಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್, ಈದ್ ಮಿಲಾದ್ ಸಮಿತಿ ಅಧ್ಯಕ್ಷ ಕಲಿಲ್ ರೆಹಮತ್ ಶರೀಫ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: