ಕರ್ನಾಟಕಪ್ರಮುಖ ಸುದ್ದಿ

ಅಭಿಮಾನಿ ಪ್ರಶಸ್ತಿ ಮತ್ತು ಮೈಸೂರು ದಿಗಂತ ಪ್ರಶಸ್ತಿ : ಅರ್ಜಿ ಆಹ್ವಾನ

ಮಂಡ್ಯ (ನ.30): ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಹಾಗೂ ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿವರ್ಷ ತಲಾ ಹತ್ತು ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡಲು ತಲಾ ಸಂಸ್ಥೆಗಳು ಒಂದು ಲಕ್ಷ ರೂ.ಗಳ ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿದೆ.

2017 ಜನವರಿ ಪ್ರಾರಂಭದಿಂದ ಅಕ್ಟೋಬರ್ 2017 ಅಂತ್ಯದವರೆಗೆ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ-ವರದಿ ಅಭಿಮಾನಿ ಪ್ರಶಸ್ತಿ-2017 ಎಂದು ದಾಖಲಿಸಿ ಹಾಗೂ ಇದೇ ಅವಧಿಯ ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಒಂದು ಲೇಖನ-ವರದಿ ಮೈಸೂರು ದಿಗಂತ ಪ್ರಶಸ್ತಿ-2017 ದಾಖಲಿಸಿ, ಪ್ರತ್ಯೇಕವಾಗಿ ಕಳುಹಿಸಬೇಕು.

ಕನ್ನಡ ದೈನಿಕ-ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಬರೆದಿರುವ ವರದಿ ಲೇಖನಿಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.

ಲೇಖನ-ವರದಿಗಳನ್ನು ಡಿಸೆಂಬರ್ 26 ರೊಳಗೆ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಭಿಮಾನಿ ಪ್ರಶಸ್ತಿ-2017 ಹಾಗೂ ಮೈಸೂರು ದಿಗಂತ ಪ್ರಶಸ್ತಿ-2017 ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ.ಬಿ.ಆರ್.ಅಂಬೇಡ್ಕರ್ ವೀಧಿ ಬೆಂಗಳೂರು-560001 ಇವರಿಗೆ ಕಳುಹಿಸಿಕೊಡಬಹುದು.

(ಎನ್‍ಬಿಎನ್‍)

Leave a Reply

comments

Related Articles

error: