ಕರ್ನಾಟಕಪ್ರಮುಖ ಸುದ್ದಿ

ಕೆಪಿಎಸ್‍ಸಿಯಿಂದ ವಿವಿಧ ಉಪನ್ಯಾಸಕರ ಹುದ್ದೆಗಳಿಗೆ ಸಂದರ್ಶನ

ಬೆಂಗಳೂರು (ನ.30): ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿನ ಪ್ರಾಂಶುಪಾಲರು, ಕನ್ನಡ ಭಾಷಾ, ಆಂಗ್ಲ ಭಾಷಾ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕಯಂತ್ರ ವಿಜ್ಞಾನ ಉಪನ್ಯಾಸಕರ ಹುದ್ದೆಗಳಿಗೆ ಡಿ.4 ರಿಂದ 13 ರ ವರೆಗೆ ಸಂದರ್ಶನವನ್ನು ನಡೆಸಲಿದೆ.

ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಅಂತರ್ಜಾಲದಲ್ಲಿ ಅರ್ಹ ಮತ್ತು ಅನರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಹಾಗೂ ಮೇಲಿನ ಎಲ್ಲಾ ಹುದ್ದೆಗಳ ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳಿಗೆ ಸಂದರ್ಶನ ಸೂಚನಾಪತ್ರಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ತಿಳಿಸಿದೆ.

(ಎನ್‍ಬಿಎನ್‍)

Leave a Reply

comments

Related Articles

error: