ಕರ್ನಾಟಕದೇಶಪ್ರಮುಖ ಸುದ್ದಿ

ಕಾನೂನು ಮಾಡುವವರು ಕಾನೂನು ಗೌರವಿಸಲ್ಲ ಅಂದ್ರೆ ಹೇಗೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ದೇಶ(ನವದೆಹಲಿ)ಡಿ.4;- ಭಾನುವಾರ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆ ವಿವಾದ ಸಂಬಂಧ ಪೊಲೀಸರ ಜತೆ ಸಂಸದ ಪ್ರತಾಪ್ ಸಿಂಹ ವರ್ತನೆ ಖಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮಾಡುವವರು ಕಾನೂನು ಗೌರವಿಸಲ್ಲ ಅಂದ್ರೆ ಹೇಗೆ? ಸಂಸದರಾಗಿ ಪ್ರತಾಪ್ ಸಿಂಹ ಮಾಡಿದ್ದು ಸರಿಯೇ? ಎಂದು ಪ್ರಶ್ನಿಸಿದ್ದಾರೆ.

ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾನೂನು ಉಲ್ಲಂಘನೆ ಮಾಡಿದಕ್ಕಾಗಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ಮಾಡುತ್ತಿದೆಯಾ, ಕಾನೂನು ಉಲ್ಲಂಘನೆ ಮಾಡುವವರನ್ನು ಬಂಧನ ಮಾಡುವುದರಲ್ಲಿ ಯಾವ ತಪ್ಪಿಲ್ಲ ಎಂದರು. ಹನುಮ ಜಯಂತಿಗೆ ನಾವು ಆಕ್ಷೇಪ ಮಾಡಿರಲಿಲ್ಲ, ಅದಕ್ಕಾಗಿ ಪೊಲೀಸ್ ಭದ್ರತೆಯನ್ನು ನೀಡಲಾಗಿತ್ತು. ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪೊಲೀಸ್ ಮೆರವಣಿಗೆಗೆ  ರೂಟ್ ಮ್ಯಾಪ್ ನೀಡಿದ್ದರು. ಅದನ್ನು ಪಾಲಿಸದೇ ಪ್ರತಾಪ್ ಸಿಂಹ ತಮ್ಮ ಹೊಸ ಮಾರ್ಗಕ್ಕಾಗಿ ಪಟ್ಟು ಹಿಡಿದರು. ಪೊಲೀಸ್ ಬಂದೋಬಸ್ತ್ ಇಲ್ಲದೆ ಅವರು ಕೇಳಿದ ಕಡೆಯೆಲ್ಲ ಅವಕಾಶ ಕೊಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಕಾನೂನು ಉಲ್ಲಂಘಿಸಿದ ಪ್ರತಾಪ್ ಸಿಂಹರನ್ನು ಜೈಲಿಗೆ ಕಳುಹಿಸಬಹುದಿತ್ತು. ಅವರು ಸಂಸದರು ಎಂದು ಬಿಟ್ಟು ಕಳುಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: