ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಂಸದ ಪ್ರತಾಪ್ ಸಿಂಹ ವಿರುದ್ಧ ಜೆಡಿಯು ಜಿಲ್ಲಾಧ್ಯಕ್ಷ ಬಿ.ಎಸ್.ಗೌಡ ದೂರು

ರಾಜ್ಯ(ಮಂಡ್ಯ)ಡಿ.4;- ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ಜೆಡಿಯು ಮಂಡ್ಯ ಜಿಲ್ಲಾಧ್ಯಕ್ಷ ಬಿ.ಎಸ್.ಗೌಡ ದೂರು ನೀಡಿದ್ದಾರೆ.

ರಾಜಕೀಯ ಹೋರಾಟದಲ್ಲಿ ದೊಂಬಿ, ಗಲಭೆ ಆಗಬೇಕು. ಲಾಠಿ ಚಾರ್ಜ್, ಗೋಲಿಬಾರ್ ನಡೆಯಬೇಕು ಎಂದು ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಅಮಿತ್ ಶಾ ಪ್ರೇರಣೆಯಿಂದಾಗಿ ಪ್ರತಾಪ್ ಸಿಂಹ ಹುಣಸೂರಿನಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದರು ಎಂದು ಆರೋಪಿಸಿದ್ದಾರೆ. ಜೊತೆಗೆ ಬ್ಯಾರಿಕೇಡ್ ಮೇಲೆಯೇ ಕಾರು ಚಲಾಯಿಸಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ, ಪ್ರತಾಪ್ ಸಿಂಹ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: