ಮೈಸೂರು

ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪರಿಷ್ಕರಣಾ ಸಭೆ : ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸುವ ಸಂಬಂಧ ವೇಳಾಪಟ್ಟಿ ಪ್ರಕಟಿಸಿದೆ : ಡಿ.ರಂದೀಪ್

ಮೈಸೂರು, ಡಿ.4:- ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸುವ ಸಂಬಂಧ ವೇಳಾಪಟ್ಟಿ ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ ಡಿ. ರಂದೀಪ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಮಾತನಾಡಿದರು. ನಮೂನೆ 19ರ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ- 07-11-2017, ಕರಡು ಮತದಾರರ ಪಟ್ಟಿಯ ಪ್ರಕಟಣೆ- 21-11-2017, ಹಕ್ಕು ಮತ್ತು ಆಕ್ಷೇಪಣೆಗಳನ್ನು(ಅರ್ಜಿಗಳನ್ನು) ಸಲ್ಲಿಸುವ ಅವಧಿ-21-11-2017 ರಿಂದ 21-12-2017, ಹಾಗೂ ಅಂತಿಮ ಮತದಾರರ ಪಟ್ಟಿಗಳ ಪ್ರಕಟನೆ-19-01-2018 ಆಗಿದೆ ಎಂದರು.  ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದಿಂದ ಚುನಾವಣೆ ಸಂಬಂಧ ಮತದಾರರ ಪಟ್ಟಿಯನ್ನು ತಯಾರಿಸಲು ಹಕ್ಕುಳ್ಳ ವ್ಯಕ್ತಿಗಳು ನಮೂನೆ 19 ರಲ್ಲಿ ದಿನಾಂಕ 28-09-2017 ರಿಂದ ದಿನಾಂಕ 07-11-2017 ರವರೆಗೆ ಸಂಬಂಧಪಟ್ಟ ಸಹಾಯಕ ಮತದಾರರ ನೋಂದಣಾಧಿಕಾರಿ/ ನಿಯೋಜಿತ ಅಧಿಕಾರಿಗಳಿಗೆ ನೀಡಬಹುದಾಗಿದೆ. ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರತಿ ಚುನಾವಣೆಯ ಮೊದಲು ಹೊಸದಾಗಿ ತಯಾರಿಸಬೇಕಾಗಿದ್ದು, ಮತದಾರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿರುವ ಎಲ್ಲಾ ವ್ಯಕ್ತಿಗಳು ಸಹ ನಿಗದಿತ ನಮೂನೆಯಲ್ಲಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಭಾರತದ ಪ್ರಜೆಯಾಗಿರುವ, ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರಬೇಕು. (ವಾಸವಿರುವ ಬಗ್ಗೆ ಗುರುತಿನ ಚೀಟಿ), 1ನೇ ನವೆಂಬರ್ 2017ಕ್ಕೆ ಮೊದಲು ಆರು ವರ್ಷಗಳ ಅವಧಿಯಲ್ಲಿ ಕನಿಷ್ಟ ಒಟ್ಟು 3 ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಿಲ್ಲದ ಯಾವುದೇ ಶಿಕ್ಷಣ ಸಂಸ್ತೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹನಾಗಿರುತ್ತಾನೆ. ಯಾವುದೇ ವ್ಯಕ್ತಿಯು ನಮೂನೆ-19ರಲ್ಲಿ ಅರ್ಜಿಯನ್ನು ಸಲ್ಲಿಸಿ, ಶಿಕ್ಷಕರ ಕ್ಷೇತ್ರದಲ್ಲಿ ಮತದಾರರಾಗಿ ನೋಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಾನು ಓದಿದ ಆರು ವರ್ಷಗಳಲ್ಲಿ ಒಟ್ಟು ಮೂರು ವರ್ಷಗಳು ಶಿಕ್ಷಕನಾಗಿ ಸೇವೆ ಸಲ್ಲಿಸಿರುವ ಕುರಿತು ಅರ್ಜಿಯೊಂದಿಗೆ ಪ್ರಮಾಣ ಪತ್ರವನ್ನು ಲಗತ್ತಿಸಿ ಸಲ್ಲಿಸತಕ್ಕದ್ದು.  ಅರ್ಜಿಗಳನ್ನು ಸಲ್ಲಿಸುವ ದಿನಾಂಕದಂದು ಯಾವುದೇ ವ್ಯಕ್ತಿಯು ಬೋಧನಾ ವೃತ್ತಿಯಲ್ಲಿ ನಿರತನಾಗಿರದಿದ್ದಲ್ಲಿ ಪ್ರಮಾಣ ಪತ್ರವನ್ನು ಅಂತಹ ವ್ಯಕ್ತಿಗೆ ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿರತಕ್ಕದ್ದು. ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ ಸಲ್ಲಿಸಿದ ಅರ್ಜಿಗಳನ್ನು ಮತದಾರರ ನೋಂದಣಿ ಅಧಿಕಾರಿಯು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ ಪರಿಗಣಿಸುವುದಿಲ್ಲ. ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯ ಎಲ್ಲಾ ಅರ್ಜಿಗಳನ್ನು ಒಟ್ಟಾರೆಯಾಗಿ ಕಳುಹಿಸಬಹುದು. ಒಂದೇ ಕುಟುಂಬದ ಇತರೆ ಸದಸ್ಯರ ನಮೂನೆ 19ರ ಅರ್ಜಿಗಳನ್ನು ಕುಟುಂಬದ ಒಟ್ಟು ಸದಸ್ಯರು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಿ ಪ್ರಮಾಣ ಪತ್ರಗಳನ್ನು ಒಳಪಡಿಸಲಾಗುವುದು.  ನಮೂನೆ 19ರಲ್ಲಿರುವ ಮುದ್ರಿತ ಅರ್ಜಿಗಳನ್ನು ಸಹಾಯಕ ನೋಂದಣಾಧಿಕಾರಿ/ ನಿಯೋಜಿತ ಅಧಿಕಾರಿಯವರ ಕಚೇರಿಗಳಿಂದ ಪಡೆಯಬಹುದು. ನಿಯೋಜಿತ ಅರ್ಜಿಗಳನ್ನು ಪಡೆಯಬಹುದಾದ ಮತ್ತು ಸಲ್ಲಿಸಬಹುದಾದ ಅಧಿಕಾರಿಗಳ ಕಚೇರಿಗಳು ಇಂತಿದೆ. ಮೈಸೂರು ನಗರ ಎಲ್ಲಾ 65 ವಾರ್ಡ್‍ಗಳ ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಮತದಾರರು-ಚುನಾವಣೆ ಶಾಖೆ-ಮೈಸೂರು, ಮೈಸೂರು, ಮಹಾನಗರ ಪಾಲಿಕೆ, ಮೈಸೂರು- 0821-2418860, ಮೈಸೂರು ತಾಲೂಕು ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಮತದಾರರು- ಮೈಸೂರು ತಾಲೂಕು ಕಚೇರಿ-0821-2414811, ಟಿ.ನರಸೀಪುರ ತಾಲೂಕು ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಮತದಾರರು-ಟಿ.ನರಸೀಪುರ ತಾಲೂಕು ಕಚೇರಿ- 08227-261233 ರಲ್ಲಿ ಸಲ್ಲಿಸಬಹುದು. ನಂಜನಗೂಡು ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಮತದಾರರು-ನಂಜನಗೂಡು ತಾಲೂಕು ಕಚೇರಿ-08221-226002, ಪಿರಿಯಾಪಟ್ಟಣ ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಮತದಾರರು-ಪಿರಿಯಾಪಟ್ಟಣ ತಾಲೂಕು ಕಚೇರಿ-08223-274175, ಕೆ.ಆರ್.ನಗರ  ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಮತದಾರರು ಕೆ.ಆರ್.ನಗರ  ತಾಲೂಕು ಕಚೇರಿ-08223-262371, ಹುಣಸೂರು ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಮತದಾರರು ಹುಣಸೂರು ತಾಲೂಕು ಕಚೇರಿ-08222-252040, ಹೆಚ್.ಡಿ.ಕೋಟೆ ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಮತದಾರರು ಹೆಚ್.ಡಿ.ಕೋಟೆ ತಾಲೂಕು ಕಚೇರಿ-08228-255325 ರಲ್ಲಿ ಸಲ್ಲಿಸಬಹುದು.
ಶಿಕ್ಷಕರ ಕ್ಷೇತ್ರದ ಮತಗಟ್ಟೆ ವಿವರ
ಪ್ರತಿ ತಾಲೂಕಿನಲ್ಲಿ ಒಂದೊಂದು ಮತಗಟ್ಟೆಯನ್ನು ಮತ್ತು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 9 ವಲಯವಿದ್ದು, ಪ್ರತಿ ವಲಯಕ್ಕೆ ಒಂದೊಂದು ಮತಗಟ್ಟೆಯಂತೆ 9 ಮತಗಟ್ಟೆಯನ್ನು, ಒಟ್ಟು ಮೈಸೂರು ಜಿಲ್ಲೆಯಲ್ಲಿ 16 ಮತಗಟ್ಟೆಗಳನ್ನು ಸ್ಥಾಪಿಸುವ ಸಂಬಂಧ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.  ಮುಂದೆ ಮತದಾರರ 1000 ಕ್ಕಿಂತ ಹೆಚ್ಚಾದಲ್ಲಿ ಆಕ್ಸಿಲರಿ ಮತಗಟ್ಟೆ ಸ್ಥಾಪಿಸಲು ಕ್ರಮವಹಿಸಲಾಗುವುದು. ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ದಿನಾಂಕ: 21-11-2017 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಪರಿಶೀಲಿಸಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಹಾಗೂ ಹೊಸ ಸೇರ್ಪಡೆಗಳಿದ್ದಲ್ಲಿ ಮೇಲ್ಕಂಡ ಕಚೇರಿಗಳಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜೆ. ಜಗದೀಶ್ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.   (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: