ಕರ್ನಾಟಕಪ್ರಮುಖ ಸುದ್ದಿ

ಶಿರಸಿ-ಸಿದ್ದಾಪುರ ವಿಧಾನ ಸಭಾ ಕ್ಷೇತ್ರಗಳ 56 ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ

ರಾಜ್ಯ(ಉತ್ತರಕನ್ನಡ)ಡಿ.7:-  ಶಿರಸಿ-ಸಿದ್ದಾಪುರ ವಿಧಾನ ಸಭಾ ಕ್ಷೇತ್ರಗಳ 56 ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಿದರು.

148ಕೋ.ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ರಿಮೋಟ್ ಒತ್ತುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ  ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾಗಮಂಗಲದ  ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಪುತ್ರಿಯ ಅದ್ಧೂರಿ ವಿವಾಹ ಆಮಂತ್ರಣದ ವಿಡಿಯೋ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಸಂಪತ್ತಿನ ತೋರ್ಪಡಿಕೆ ಸರಿಯಲ್ಲ. ಇದು ಸಂಪತ್ತಿನ ಕೆಟ್ಟ ರೀತಿಯ ಪ್ರದರ್ಶನ. ಮೊದಲಿನಿಂದಲೂ ನಾನಿದನ್ನು ವಿರೋಧಿಸಿಕೊಂಡು ಬಂದಿದ್ದೇನೆ ಎಂದರು. ರಾಜಕಾರಣಿಯಾದವರು ಬೇರೆಯವರಿಗೆ ಮಾದರಿಯಾಗಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. (ಎಸ್.ಎಚ್)

 

Leave a Reply

comments

Related Articles

error: