ಕರ್ನಾಟಕ

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ : ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಅರ್ಪಣೆ

ರಾಜ್ಯ(ಮಡಿಕೇರಿ) ಡಿ.8 :- ರಾಷ್ಟ್ರದ ಏಕತೆ ಅಖಂಡತೆಗೆ ಬಲಿದಾನಗೈದ ವೀರಯೋಧರಿಗೆ ಗೌರವ ನಮನ ಸಲ್ಲಿಸುವ ಮೂಲಕ ನಗರದ ಯುದ್ಧ ಸ್ಮಾರಕದಲ್ಲಿ ‘ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ’ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಯುದ್ಧ ಸ್ಮಾರಕದಲ್ಲಿ ಗುರುವಾರ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ನಡೆಯಿತು.  ಈ ಸಂದರ್ಭ ಹಾಜರಿದ್ದ ಬ್ರಿಗೇಡಿಯರ್ ಎಂ.ಎನ್.ಕುಟ್ಟಯ್ಯ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಕಮಾಂಡರ್ ಎಂ.ವಿ.ನಾಯಕ್ ಅವರು ಸೇರಿದಂತೆ ಹಲವು ಗಣ್ಯರು ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಅರ್ಪಿಸಿದರು. ಕೊಡಗು ಜಿಲ್ಲಾ ಪೊಲೀಸ್ ದಳದಿಂದ ಇದೇ ಸಂದರ್ಭ ಬ್ಯೂಗಲ್ ರಿಟ್ರೀಚ್ ಮೂಲಕ ಹುತಾತ್ಮ ಯೋಧರಿಗೆ ಗೌರವವನ್ನು ಸಲ್ಲಿಸಲಾಯಿತು. ಮೂರು ಸುತ್ತಿನ ಕುಶಾಲತೋಪನ್ನು ಸಿಡಿಸಲಾಯಿತು.

ಆಚರಣೆಯ ಪ್ರಯುಕ್ತ ಹೊರತರಲಾದ ಧ್ವಜವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಗೀತಾ ಎಂ.ಶೆಟ್ಟಿ ಅವರು ಬ್ರಿಗೇಡಿಯರ್ ಎಂ.ಎನ್.ಕುಟ್ಟಯ್ಯ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಅವರಿಗೆ ನೀಡುವ ಮೂಲಕ ಬಿಡುಗಡೆ ಮಾಡಲಾಯಿತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: