ಮೈಸೂರು

ಡಿ.9ರಂದು ಗೌರವ ಡಾಕ್ಟರೇಟ್ ಪದವಿ ಪ್ರದಾನ

ಮೈಸೂರು, ಡಿ.8 : ಇಂಡಿಯನ್ ವರ್ಚ್ಯುಯಲ್ ಯೂನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಷನ್ ನಿಂತ ಡಿ.9ರಂದು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಡೀನ್ ಡಾ.ಜಾನ್ ಲೆಸ್ಲಿ ಕುಮಾರ್ ತಿಳಿಸಿದರು.

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ, ಮಹಾಪೌರ ಎಂ.ಜೆ.ರವಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್, ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ. ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮಿಗಳು ಸೇರಿದಂತೆ ಇತರರು ಭಾಗವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಸ್ಥೆಯೂ ಕಳೆದ ಹತ್ತು ವರ್ಷಗಳಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿದ್ದು, ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 30 ಜನರಿಗೆ ಪದವಿ ಪ್ರದಾನ ಮಾಡಲಾಗುವುದು. ವ್ಯಕ್ತಿಗಳ ಶಿಕ್ಷಣಕ್ಕಿಂತ ಕೌಶಲ್ಯ ಪ್ರತಿಭೆಯನ್ನು ಗುರುತಿಸಿ ಈ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸಂಸ್ಥೆಯ ಡಾ.ಕೆ.ಆರ್.ರವಿಕುಮಾರ್, ಸೈಯದ್ ಅಸ್ಲೀಮ್, ಮಂಜುನಾಥ್ ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: