ಮೈಸೂರು

ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಸಾರ್ವಜನಿಕ ಗ್ರಂಥಾಲಯ ಇಲಾಖೆ, ಮೈಸೂರು ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಸಹಯೋಗದಲ್ಲಿ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ್ ನೆರವೇರಿಸಿದರು..

ನಗರ ಮತ್ತು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರಗಳಿಗೆ ಮೈಸೂರು ನಗರಪಾಲಿಕೆಯಿಂದ ಪಾವತಿಸಬೇಕಾಗಿರುವ 9ಕೋಟಿ.ರೂ. ಕರದಲ್ಲಿ 10ಲಕ್ಷರೂ.ಗಳ ಚೆಕ್ ಅನ್ನು ಮೇಯರ್ ಬಿ.ಎಲ್.ಭೈರಪ್ಪ ಸಾರ್ವಜನಿಕ ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಬಿ.ಮಂಜುನಾಥ ಅವರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನಗರ ಕೇಂದ್ರ ಗ್ರಂಥಾಲಯದ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಕೋಲ್ಕತ್ತಾ ರಾಷ್ಟ್ರೀಯ ಗ್ರಂಥಾಲಯ ವಿಶ್ರಾಂತ ಮಹಾನಿರ್ದೇಶಕ ಡಾ.ಪಿ.ವೈ. ರಾಜೇಂದ್ರಕುಮಾರ್, ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: