ಕರ್ನಾಟಕ

ಸಾಲ ತೀರಿಸದ ಕಾರಣ ವ್ಯಕ್ತಿಯ ಬೆರಳಿಗೆ ಕತ್ತರಿ

ತುಮಕೂರು,ಡಿ.11: ಸಾಲ ತಿರಿಸುತ್ತಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಬೆರಳನ್ನೇ ಕತ್ತರಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ತಾಲೂಕಿನ ನಿಡುಹೊಳಲು ಗ್ರಾಮದ ನಿವಾಸಿ ಶಿವಣ್ಣ ಕೈ ಬೆರಳನ್ನು ಕಳೆದುಕೊಂಡ ವ್ಯಕ್ತಿ. ಶಿವಣ್ಣ ಅದೇ ಗ್ರಾಮದ ಕುಮಾರ್ ಎಂಬುವರಿಂದ ಕಳೆದ 15 ದಿನದ ಹಿಂದೆ ಒಂದು ಸಾವಿರ ರೂ. ಸಾಲ ಪಡೆದಿದ್ದರು. ನಿನ್ನೆ  ಕುಮಾರ್ ಸಾಲ ಹಿಂದಿರುಗಿಸುಂತೆ ಶಿವಣ್ಣಗೆ ತಾಕೀತು ಮಾಡಿದ್ದಾನೆ. ದುಡ್ಡು ಹೊಂದಿಸಲು ಆಗದೇ ಇದ್ದುದರಿಂದ ಇಂದು ಸೋಮವಾರ ಮರಳಿಸುವುದಾಗಿ ಹೇಳಿದ್ದಾರೆ. ಇದಕ್ಕೆ ಒಪ್ಪದ ಕುಮಾರ್ ಹಾಗೂ ಆತನ ಪತ್ನಿ ವೀಣಾ ಶಿವಣ್ಣರ ಜೊತೆ ಜಗಳ ಮಾಡಿದ್ದಾರೆ. ಜಗಳ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ( ವರದಿ: ಪಿ.ಎಸ್ )

Leave a Reply

comments

Related Articles

error: