ಸುದ್ದಿ ಸಂಕ್ಷಿಪ್ತ

ಜಿಲ್ಲಾ ಸಹಕಾರ ಒಕ್ಕೂಟದಿಂದ ಚರ್ಚಾ – ಪ್ರಬಂಧ ಸ್ಪರ್ಧೆ ಡಿ.12.

ಮೈಸೂರು, ಡಿ. 11 : ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟ ಇತರೆ ಸಂಘಟನೆಗಳ ಸಂಯುಕ್ತವಾಗಿ ಡಿ.12ರ ಮಧ್ಯಾಹ್ನ 3 ಗಂಟೆಗೆ ಚಾಮರಾಜ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಪಿ.ಯುಸಿ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ದೆ ಹಾಗೂ ಪೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಸಿದೆ.

ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹೆಚ್.ವಿ.ರಾಜೀವ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಒಕ್ಕೂಟದ ನಿರ್ದೇಶಕ ಪಿ.ಸತೀಶ್, ಶ್ರೀನಿವಾಸ್, ಅಬ್ದುಲ್ ಮುಜೀಬ್, ಎಂ.ಬಿ.ಮಂಜೇಗೌಡ ಮೊದಲಾದವರು ಭಾಗವಹಿಸುವರು. ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಎಸ್.ಚಂದ್ರಶೇಖರ್ ಬಹುಮಾನ ವಿತರಿಸುವರು. (ಕೆ.ಎಂ.ಆರ್)

Leave a Reply

comments

Related Articles

error: