ಸುದ್ದಿ ಸಂಕ್ಷಿಪ್ತ

ರಸಗ್ರಹಣ ಶಿಬಿರಕ್ಕೆ ಅರ್ಜಿ ಆಹ್ವಾನ

ಮೈಸೂರು, ಡಿ,12:-  ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2017-18 ನೇ ಸಾಲಿನ ಸಂಗೀತ ನೃತ್ಯ ಕಲಾ ಪ್ರಕಾರಗಳಿಗೆ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ  ಗುರುಶಿಷ್ಯ ಪರಂಪರೆ ತರಬೇತಿ ಹಾಗೂ ರಸಗ್ರಹಣ ಶಿಬಿರ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಗುರುಗಳು ಮನವಿ ಪತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 15 ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕನ್ನಡ ಭವನ ಬೆಂಗಳೂರು -2 ಗೆ  ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22215072 ನ್ನು ಸಂಪರ್ಕಿಸಬೇಕೆಂದು ಕೋರಲಾಗಿದೆ. (ಕೆ.ಎಸ್,ಸ್.ಎಚ್)

Leave a Reply

comments

Related Articles

error: