ಮೈಸೂರು

ಯೋಗಾನರಸಿಂಹಸ್ವಾಮಿ ದೇವಸ್ಥಾನದ ಎನ್.ಶ್ರೀನಿವಾಸನ್, ಸಮಾಜ ಸೇವಕ ಕೆ.ರಘುರಾಂ ವಾಜಪೇಯಿಯವರಿಗೆ ಗೌರವ ಡಾಕ್ಟರೇಟ್

ಮೈಸೂರು,ಡಿ.12-ಬೆಂಗಳೂರಿನ ಇಂಡಿಯನ್ ವರ್ಚುಯಲ್ ಯುನಿರ್ವಸಿಟಿ ಫಾರ್ ಪೀಸ್ ಅಂಡ್ ಎಜುಕೇಷನ್‍ನ ಘಟಿಕೋತ್ಸವ ಸಮಾರಂಭದಲ್ಲಿ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಹಾಗೂ ಸಮಾಜ ಸೇವಕ ಕೆ.ರಘುರಾಂ ವಾಜಪೇಯಿಯವರಿಗೆ ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇವರಿಬ್ಬರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಬಳಿಕ ಮಾತನಾಡಿದ ಕೆ.ರಘುರಾಂ ವಾಜಪೇಯಿ, ಕೇಂದ್ರ ಸರ್ಕಾರದ ನೀತಿ ಆಯೋಗದ ಆಶ್ರಯದಲ್ಲಿ ರಚನೆಯಾಗಿರುವ ಹಾಗೂ ಕೇಂದ್ರ ಸರ್ಕಾರದ ಹೊಸ ಕೌಶಲ್ಯ ನೀತಿಯನ್ನು ಒಳಗೊಂಡಿರುವ ಬೆಂಗಳೂರಿನ ಇಂಡಿಯನ್ ವರ್ಚುಯಲ್ ಯುನಿರ್ವಸಿಟಿ ಫಾರ್ ಪೀಸ್ ಅಂಡ್ ಎಜುಕೇಷನ್ ದೇಶದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ರೂಪುಗೊಂಡಿದೆ. ಇಂತಹ ವಿಶ್ವವಿದ್ಯಾನಿಲಯದಿಂದ ಕೊಡಲ್ಪಡುವ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾಗಿರುವುದು ಸಂತಸದ ವಿಷಯ ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಮಾಜಿ ಮೇಯರ್ ಎಂ.ಜೆ.ರವಿಕುಮಾರ್, ಮಾಜಿ ಉಪಲೋಕಾಯುಕ್ತ ನ್ಯಾ.ಚಂದ್ರಶೇಖರಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಡಾ.ಎ.ಪುಷ್ಪ ಅಯ್ಯಂಗಾರ್ ಇತರರು ಉಪಸ್ಥಿತರಿದ್ದರು. (ವರದಿ-ಎಂ.ಎನ್)

Leave a Reply

comments

Related Articles

error: