ಕರ್ನಾಟಕ

ಲತಾ ಹಂಸಲೇಖ ಮತ್ತು ತಂಡದವರಿಂದ ಗಾನಯಾನ ಕಾರ್ಯಕ್ರಮ

ಹಾಸನ (ಡಿ.12): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಡಿ.20 ರಂದು ಸಂಜೆ 6 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಾನಯಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಹೆಸರಾಂತ ಚಲನಚಿತ್ರ ಹಿನ್ನೆಲೆ ಗಾಯಕಿ ಲತಾ ಹಂಸಲೇಖ ಮತ್ತು ತಂಡದವರಿಂದ ಕನ್ನಡ ಚಲನಚಿತ್ರಗಳ ಸುಮಧುರ ಸಂಗೀತಗಳ ರಸ ಸಂಜೆ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ವಿನೋದ್ ಚಂದ್ರ ಅವರು ತಿಳಿಸಿದ್ದಾರೆ.

(ಎನ್‍ಬಿಎನ್)

Leave a Reply

comments

Related Articles

error: