ಕರ್ನಾಟಕಪ್ರಮುಖ ಸುದ್ದಿ

ಸಾವಿನಲ್ಲೂ ರಾಜಕೀಯ ಮಾಡುವವರು ದೊಡ್ಡ ರಾಕ್ಷಸರು: ಪ್ರಕಾಶ್ ರೈ

ಮಂಗಳೂರು,ಡಿ.12-ಸಾವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವವರು ದೊಡ್ಡ ರಾಕ್ಷಸರು ಎಂದು ನಟ ಪ್ರಕಾಶ್ ರೈ ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಮಂಗಳೂರಿನ ಫರಂಗಿಪೇಟೆಯಿಂದ ಮಾಣಿವರೆಗೆ ಆಯೋಜಿಸಿದ್ದ ಸಾಮರಸ್ಯ ನಡಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಪ್ರಕಾಶ್ ರೈ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಮತೀಯ ಗಲಭೆಗಳನ್ನು ಯಾರು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಜನರು ಮೂರ್ಖರಲ್ಲ. ಸಾವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ಮನುಷ್ಯ ನನ್ನು ಕೊಲ್ಲುವ ಅರ್ಹತೆ ಯಾರಿಗೂ ಇಲ್ಲ. ದೇವರ ಹೆಸರನ್ನು ಹೇಳಿ ರಾಜಕೀಯ ಮಾಡುವವರನ್ನು ಎದುರಿಸಬೇಕಾಗಿದೆ ಎಂದರು.

ಎಲ್ಲರೂ ಒಂದಾಗಬೇಕಿದೆ, ಕಲಾವಿದ ಪ್ರತಿಭೆಯಿಂದ ಮಾತ್ರ ಗೆಲ್ಲುವುದಲ್ಲ. ಸಮಾಜದ ಜೊತೆಗಿದ್ದು ಬಾಳುವುವವನೇ ನಿಜವಾದ ಕಲಾವಿದ ಎಂದು ಅಭಿಪ್ರಾಯಪಟ್ಟರು. (ವರದಿ-ಎಂ.ಎನ್)

Leave a Reply

comments

Related Articles

error: