ಮೈಸೂರು

ಮೂವರು ಮನೆಗಳ್ಳರ ಬಂಧನ: 170 ಗ್ರಾಂ ಚಿನ್ನಾಭರಣ ವಶ

ಮೈಸೂರು,ಡಿ.15-ಮನೆಗಳವು ಮಾಡಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಉದಯಗಿರಿ ಪೊಲೀಸರು ಬಂಧಿತರಿಂದ ೧೭೦ ಗ್ರಾಂ ಚಿನ್ನಾಭರಣ, ಮೊಬೈಲ್ ಫೋನುಗಳು ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಮೊಹಮದ್ ವಸೀಂ (೧೯), ಮೆಹೇಬುದ್ದೀನ್ (೨೦) ಹಾಗೂ ೧೭ ವರ್ಷದ ಬಾಲಕ ಬಂಧಿತರು. ಕಲ್ಯಾಣಗಿರಿಯ ಮನೆಯೊಂದರಲ್ಲಿ ಕಳವು ಮಾಡಿದ್ದ ಇವರು, ಕಳೆದ ಜನವರಿ ತಿಂಗಳಿನಲ್ಲಿ ಶಕ್ತಿ ನಗರದ ಮನೆಯೊಂದರಲ್ಲಿ ಕಳವು ಮಾಡಿದ್ದರು. ಕಳ್ಳತನ ಮಾಡುವ ಸಲುವಾಗಿ ದ್ವಿಚಕ್ರ ವಾಹನವೊಂದನ್ನು ಕಳವು ಮಾಡಿದ್ದರು.

ಉದಯಗಿರಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ-ಕೆ.ಎಸ್, ಎಂ.ಎನ್)

 

Leave a Reply

comments

Related Articles

error: