ಮೈಸೂರು

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಂದ ಕಾಮಗಾರಿ ವೀಕ್ಷಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಿ.ಧ್ರುವಕುಮಾರ್ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಅಂಬೇಡ್ಕರ್  ಭವನ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು.

ಹಂಚ್ಯಾ-ಸಾತಗಳ್ಳಿ ಬಿ ವಲಯ ಬಡಾವಣೆಯ ನಾಗರೀಕರು ಮನವಿ ಸಲ್ಲಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದರು. ಧ್ರುವಕುಮಾರ್ ಮೂಲಭೂತ ಸೌಕರ್ಯಗಳಾದ ನೀರಿನ ಸೌಲಭ್ಯ, ದಾರಿದೀಪಗಳ ವ್ಯವಸ್ಥೆಯನ್ನು, ವಿದ್ಯುತ್ ಸರಬರಾಜಿನಲ್ಲಿ ಆಗುತ್ತಿರುವ ತೊಂದರೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಉದಯಗಿರಿ ಬಡಾವಣೆಯಲ್ಲಿ ಎಸ್.ಸಿ ಮತ್ತು ಎಸ್.ಟಿ ವರ್ಗಕ್ಕೆ ಸೇರಿದ ಸ್ಮಶಾನ ಪರಿಶೀಲನೆ ನಡೆಸಿ ಸ್ಮಶಾನಕ್ಕೆ ಮೂಲ ಸೌಕರ್ಯಗಳನ್ನು ಒದಗಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಪ್ರಾಧಿಕಾರದ ಆಯುಕ್ತ ಡಾ.ಎಂ.ಮಹೇಶ್, ಅಧೀಕ್ಷಕ ಅಭಿಯಂತರ ಶಿವಕುಮಾರ್, ಕಾರ್ಯಪಾಲಕ ಅಭಿಯಂತರ ರಾಜು, ಪ್ರಾಧಿಕಾರದ ಸದಸ್ಯ ಭಾಸ್ಕರ್ ಎಲ್.ಗೌಡ, ವಲಯಾಧಿಕಾರಿಗಳಾದ ರವೀಂದ್ರಕುಮಾರ್, ಜಿ.ಮೋಹನ್, ಮಹೇಶ್ ಬಾಬು ಮತ್ತಿತರರು ಜೊತೆಗಿದ್ದರು.

Leave a Reply

comments

Related Articles

error: