ಸುದ್ದಿ ಸಂಕ್ಷಿಪ್ತ
ಕನ್ನಡ ರಾಜ್ಯೋತ್ಸವ ಆಚರಣೆ –ನ.16 ರಂದು
ಶ್ರೀ ನಟರಾಜ ಪ್ರತಿಷ್ಠಾನದ ವತಿಯಿಂದ ನ.16 ರಂದು ಬೆ. 10.30 ಕ್ಕೆ ನಟರಾಜ ಸಭಾ ಮಂಟಪದಲ್ಲಿ ಕನ್ನಡ ರಾಜ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ನಟರಾಜ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಚಿದಾನಂದ ಸ್ವಾಮಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ. ನಾಗೇಂದ್ರಪ್ಪ, ನಟರಾಜ ಪ್ರತಿಷ್ಠಾನದ ಶೈಕ್ಷಣಿಕ ಸಂಯೋಜಕ ಪ್ರೊ.ಸತ್ಯನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ.