ಪ್ರಮುಖ ಸುದ್ದಿ

ಡಿ.18ರವರೆಗೆ ರವಿ ಬೆಳಗೆರೆ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು,ಡಿ.16-ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡಲಾಗಿದೆ.

ರವಿ ಬೆಳಗೆರೆ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ರವಿ ಬೆಳಗೆರೆ ಮಧ್ಯಂತರ ಜಾಮೀನು ಡಿ.18ರವರೆಗೆ ವಿಸ್ತರಣೆ ಮಾಡಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಧುಸೂದನ್ ಶನಿವಾರ ಆದೇಶ ಹೊರಡಿಸಿದ್ದಾರೆ.

ಈ ಮೊದಲು ರವಿ ಬೆಳಗೆರೆಗೆ ಡಿ.16ರವರೆಗೆ ಜಾಮೀನು ಮಂಜೂರು ಮಾಡಲಾಗಿತ್ತು. ಅದು ಇಂದಿಗೆ (ಶನಿವಾರ) ಅಂತ್ಯವಾಗಿದ್ದರಿಂದ ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಮದುಸೂಧನ್ ಅವರು ಮಧ್ಯಂತರ ಜಾಮೀನು ವಿಸ್ತರಣೆ ಮಾಡಿದರು. ಇಬ್ಬರ ಶ್ಯೂರಿಟಿ, 1 ಲಕ್ಷ ರೂ. ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ನ್ಯಾಯಾಧೀಶ ಮದುಸೂಧನ್ ವಿಧಿಸಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

error: