ಕರ್ನಾಟಕ

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ: ಓರ್ವನ ಬಂಧನ

ಹಾಸನ,ಡಿ.17-ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ಯಸಳೂರು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಹೆಂದಲಿ ದೇವರಾಜು ಬಂಧಿತ ಆರೋಪಿ. ಸಕಲೇಶಪುರ ಯಸಳೂರು ಹೋಬಳಿಯ ಹೆಂದಲಿ ಗ್ರಾಮದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಅಕ್ರಮ ಮರಳು ದಂಧೆಕೋರರು ತಪ್ಪಿಸಿಕೊಳ್ಳುವ ಬರದಲ್ಲಿ ಪೊಲೀಸರ ಮೇಲೆ ವಾಹನ ಚಲಾಯಿಸಲು ಮುಂದಾಗಿದ್ದಾರೆ. ಈ ವೇಳೆ ಒಬ್ಬನನ್ನು ಶಿಫ್ಟರ್ ಕಾರ್ ಸಮೇತ ಬಂಧಿಸಿದ್ದು, ಉಳಿದವರು ಟಿಪ್ಪರ್ ಲಾರಿ, ಟ್ರ್ಯಾಕ್ಟರ್ ಸಮೇತ ಪರಾರಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಹರೀಶ್, ಮಂಜುನಾಥ್, ಹಾಗೂ ಕಾನ್ಸ್ ಸ್ಟೇಬಲ್ ಹೊನ್ನರಾಜು ಭಾಗವಹಿಸಿದ್ದರು. ಈ ಸಂಬಂಧ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ-ಕೆ.ಎಸ್, ಎಂ.ಎನ್)

Leave a Reply

comments

Related Articles

error: