ಪ್ರಮುಖ ಸುದ್ದಿ

ಮುಂಬೈನ ಅಂಗಡಿಯೊಂದರಲ್ಲಿ ಅಗ್ನಿ ಅವಘಡ: 12 ಮಂದಿ ಸಜೀವ ದಹನ

ಮುಂಬೈ,ಡಿ.18-ಮುಂಬೈನ ಅಂಗಡಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ 12 ಮಂದಿ ಮೃತಪಟ್ಟಿರುವ ಘಟನೆ ಖೈರನಿ ರಸ್ತೆಯಲ್ಲಿರುವ ಅಂಗಡಿಯಲ್ಲಿ ನಡೆದಿದೆ.

ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಈ ಬೆಂಕಿ ಅವಘಡಕ್ಕೆ ಕಾರಣವೇನೆಂದು ಸದ್ಯಕ್ಕೆ ತಿಳಿದಿಲ್ಲ. ಗಾಯಾಳುಗಳ ನಿಖರ ಸಂಖ್ಯೆ ಹಾಗೂ ಅವಘಡದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. (ವರದಿ-ಎಂ.ಎನ್)

Leave a Reply

comments

Related Articles

error: