ಕರ್ನಾಟಕ

ಗ್ರೂಪ್ ಡಿ ವೃಂದದ ನೇಮಕ : ಆಕ್ಷೇಪಣೆಗಳಿಗೆ ಆಹ್ವಾನ

ಮಂಡ್ಯ (ಡಿ.18): ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ವೃಂದದ ಅಡುಗೆ ಸಹಾಯಕರ ಮತ್ತು ಕಾವಲುಗಾರರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‍ಸೈಟ್‍ www.mandya.nic.in ಅಲ್ಲಿ ಪ್ರಕಟಿಸಲಾಗಿದೆ.

ಈ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಅಭ್ಯರ್ಥಿಗಳಿಂದ ಏನಾದರೂ ಆಕ್ಷೇಪಣೆ ಇದ್ದಲ್ಲಿ, ಲಿಖಿತವಾಗಿ ಪೂರಕ ದೃಢೀಕೃತ ದಾಖಲೆಗಳೊಂದಿಗೆ ಡಿಸೆಂಬರ್ 27 ರೊಳಗೆ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಮಟ್ಟದ ನೇಮಕಾತಿ ಸಮಿತಿ ಹಾಗೂ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಂಡ್ಯ ಇವರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂ:08232-220772 ಅನ್ನು ಸಂಪರ್ಕಿಸಬಹುದು.

(ಎನ್‍ಬಿಎನ್‍)

Leave a Reply

comments

Related Articles

error: