ಪ್ರಮುಖ ಸುದ್ದಿ

ಗುಜರಾತ್ ಚುನಾವಣೆ: ಅಲ್ಪೇಶ್ ಠಾಕೂರ್, ಜಿಗ್ನೇಶ್ ಮೆವಾನಿಗೆ ಭರ್ಜರಿ ಜಯ

ಅಹಮದಾಬಾದ್,ಡಿ.18-ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅಲ್ಪೇಶ್ ಠಾಕೂರ್ ಮತ್ತು ಜಿಗ್ನೇಶ್ ಮೆವಾನಿ ಭರ್ಜರಿ ಜಯಗಳಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದತ್ತಾಗಿದೆ.

ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ರಾಧನ್ಪುರ್ ಕ್ಷೇತ್ರದಲ್ಲಿ 55,751 ಮತಗಳನ್ನು ಪಡೆದು ಹತ್ತಿರದ ಪ್ರತಿ ಸ್ಪರ್ಧಿ ಬಿಜೆಪಿಯ ಲವಿಂಜಿ ಸೋಲಂಕಿಯವರನ್ನು 12,544 ಮತಗಳಿಂದ ಸೋಲಿಸಿದ್ದಾರೆ. ಕಳೆದ ನವೆಂಬರ್ ನಲ್ಲಿ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು.

ಬನಸ್ಕಾಂತ ಜಿಲ್ಲೆಯ ವಡ್ಗಾಮ್ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇನ್ನೋರ್ವ ಯುವ ನಾಯಕ, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ 63,471 ಮತಗಳನ್ನು ಪಡೆದು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ವಿಜಯಕುಮಾರ್ ಚಕ್ರವರ್ತಿಯವರನ್ನು 21,042 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಒಟ್ಟಾರೆ ಕಾಂಗ್ರೆಸ್ ಪಕ್ಷದ ಅಸ್ತಿತ್ವದ ಪ್ರಶ್ನೆಯಾಗಿದ್ದ ಈ ಎರಡೂ ಕ್ಷೇತ್ರಗಳಲ್ಲೂ ಕೈ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದತ್ತಾಗಿದೆ. (ವರದಿ-ಎಂ.ಎನ್)

 

Leave a Reply

comments

Related Articles

error: