
ಮೈಸೂರು
ಡಿಡಿಪಿಐ ಕಚೇರಿಯ ನೂತನ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ವಾಸು
ಮೈಸೂರು,ಡಿ.18-ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ನೂತನ ಕಟ್ಟಡ ಕಾಮಗಾರಿಗೆ ಶಾಸಕ ವಾಸು ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.
ನಗರದ ಜೆಎಲ್ ಬಿ ರಸ್ತೆಯಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆವರಣದಲ್ಲಿ ಸುಮಾರು 1.28 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು. ನೆಲ ಅಂತಸ್ತು, 2 ಅಂತಸ್ತಿನ ಕಟ್ಟಡ ಕಾಮಗಾರಿ ಇದಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯೀಮಾ ಸುಲ್ತಾನ ನಜೀರ್ ಅಹಮದ್, ಕಾಡಾ ಅಧ್ಯಕ್ಷ ನಂಜಪ್ಪ, ನಗರಪಾಲಿಕೆ ಸದಸ್ಯ ರಮೇಶ್, ಡಿಡಿಪಿಐ ಮಂಜುಳ, ಪ್ರಶಾಂತ್ ಗೌಡ ಹಾಜರಿದ್ದರು. (ವರದಿ-ಎಚ್.ಎನ್, ಎಂ.ಎನ್)