ಮೈಸೂರು

ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

ಮೈಸೂರು,ಡಿ.19:- ಪದೇ ಪದೇ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಂಗಳವಾರ ಕೋಟೆ ಆಂಜನೇಯ ದೇವಸ್ಥಾನದ ಬಳಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.  ಈ ಸಂದರ್ಭ ಮಾತನಾಡಿದ ಪ್ರಮುಖರು ಪದೇ ಪದೇ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಹತ್ಯೆಗಳು ನಡೆಯುತ್ತಿವೆ. ಆದರೂ ಸರ್ಕಾರ ಹಂತಕರನ್ನು ಬಂಧಿಸದೇ ಕಾಲಹರಣ ಮಾಡುತ್ತಿದೆ ಎಂದರಲ್ಲದೇ ಕೋಮು ಪ್ರಚೋದನೆಗೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು. ಹಿಂದೂ ಕಾರ್ಯಕರ್ತರ ಹಂತಕರು ಅಂತಾರಾಷ್ಟ್ರೀಯ ಜಿಹಾದಿ ಭಯೋತ್ಪಾದಕರು, ಹಿಂದೂ ಯುವಕರು ಸಿಡಿದೆದ್ದರೆ ದೇಶದ್ರೋಹಿಗಳು ನಿರ್ನಾಮವಾಗುತ್ತಾರೆ. ಹಂತಕರನ್ನು ಬಂಧಿಸಿ ಕೂಡಲೇ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಪ್ರಮುಖರಾದ ಡಾ.ಬಿ.ಮಂಜುನಾಥ್, ನಂದೀಶ್ ಪ್ರೀತಂ, ರಾಜೀವ್, ನಾಗೇಂದ್ರ, ಸೇರಿದಂತೆ 500ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಅರ್ಪಿಸಿತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: