ಮೈಸೂರು

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ ರಚನೆಗೆ ಒತ್ತಾಯ

ಮೈಸೂರು,ಡಿ.19 – ಸಂವಿಧಾನದ 74ನೇ ತಿದ್ದುಪಡಿ ಪ್ರಕಾರ ರಾಜ್ಯದ ಎಲ್ಲ ನಗರ ಪಾಲಿಕೆಗಳಲ್ಲಿ ವಾರ್ಡ್ ಸಮಿತಿ ಸ್ಥಾಪಿಸುವಂತೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜಂಟಿ ಕಾರ್ಯದರ್ಶಿ ನರೇಂದ್ರ ಕುಮಾರ್ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ  ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ 74ನೇ ತಿದ್ದುಪಡಿ ಪ್ರಕಾರ 3 ಲಕ್ಷಗಿಂತ ಹೆಚ್ಚು ಜನಸಂಖ್ಯೆಗಿಂತ ಅಧಿಕವಿರುವ ನಗರಗಳಲ್ಲಿ ವಾರ್ಡ್ ಸಮಿತಿ ರಚಿಸಬೇಕು. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸ್ಥಾಪಿಸಿರುವಂತೆ ಉಳಿದ ಪಾಲಿಕೆಗಳಲ್ಲಿ ವಾರ್ಡ್ ಸಮಿತಿ ರಚಿಸಬೇಕು ಎಂದು ಹೇಳಿದರು.

ವಾರ್ಡ್ ಸಮಿತಿ ರಚಿಸುವಂತೆ ಅಭಿಯಾನ ಹಮ್ಮಿಕೊಂಡಿದ್ದೇವೆ. ಈಗಾಗಲೇ 11 ನಗರಗಳಲ್ಲಿ 49 ಶಾಸಕರಿಗೆ ಮನವಿ ಸಲ್ಲಿಸಿ ಕೆಎಂಸಿ ನಿಯಮಗಳಿಗೆ ತಿದ್ದುಪಡಿ ಮಾಡಲು ಆಗ್ರಹಿಸಿದ್ದೇವೆ ಎಂದರು.

ರಾಜ್ಯ ಕಾರ್ಯಕಾರಿ ಸಮಿತಿ ಅಜಿತ್ ನಾ.ನಾಯ್ಕ್ ಮಾತನಾಡಿ, ರೇರಾ ಕಾಯಿದೆಯನ್ನು ಗ್ರಾಹಕರಿಗೆ ಅನುಕೂಲವಾಗುವಂತೆ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರವು ಮುಂದಾಗಬೇಕು ಎಂದು ತಿಳಿಸಿದರು.

ಮೋಹನ್ ಕುಮಾರ್, ಮಾಲಿನಿ, ಚಿಕ್ಕಣ್ಣ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: