
ಕರ್ನಾಟಕಪ್ರಮುಖ ಸುದ್ದಿ
ಕೆಆರ್ಎಸ್ ಆಣೆಕಟ್ಟೆಯಿಂದ ನಾಲೆಗಳಿಗೆ ನೀರು
ರಾಜ್ಯ(ಮಂಡ್ಯ)ಡಿ.20:- ಕೆಆರ್ಎಸ್ ಆಣೆಕಟ್ಟೆಯಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.
ಬುಧವಾರ ಬೆಳಗ್ಗೆಯಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ಇಂದಿನಿಂದ ಹತ್ತು ದಿನಗಳ ಕಾಲ ನಾಲೆಗಳಲ್ಲಿ ನೀರು ಹರಿಯಲಿದೆ. ಕಳೆದ ಹತ್ತು ದಿನಗಳ ಹಿಂದೆ ನಾಲೆಗಳಿಗೆ ನೀರು ನಿಲ್ಲಿಸಲಾಗಿತ್ತು. ಆದರೆ ರೈತರ ಬೆಳೆಗೆ ನೀರಿನ ಅವಶ್ಯಕತೆ ಇರುವುದರಿಂದ ಇಂದಿನಿಂದ ಹತ್ತು ದಿನಗಳ ಕಾಲ ನೀರು ಬಿಡಲಾಗುತ್ತಿದೆ. ಹತ್ತು ದಿನದ ನಂತರ ಪುನಃ ನೀರು ಬಿಡುವ ಬಗ್ಗೆ ಜನವರಿ 5 ರೊಳಗೆ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದೆಂದು ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯ ತೀರ್ಮಾನದಂತೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. (ಕೆ.ಎಸ್,ಎಸ್.ಎಚ್)