
ಮೈಸೂರು
ಬುಧವಾರದಂದು ವಿದ್ಯುತ್ ವ್ಯತ್ಯಯ
ಮಾರಿಗುಡಿ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನಗರದ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಿನಲ್ಲಿ ತೊಡಕುಂಟಾಗುವುದು. ಇದರಿಂದ ಇಟ್ಟಿಗೆಗೂಡು ಮತ್ತು ಚಾಮರಾಜೇಂದ್ರ ಮೃಗಾಲಯ ಹಾಗೂ ದಸರಾ ವಸ್ತು ಪ್ರದರ್ಶನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು (ನ.16) ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಎನ್.ಆರ್.ಮೊಹಲ್ಲಾ ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ.