ಮೈಸೂರು

ಕುಡಿದ ಮತ್ತಿನಲ್ಲಿ ಯುವಕ ಆತ್ಮಹತ್ಯೆ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಷ್ಕರ್ ಮೊಹಲ್ಲಾದಲ್ಲಿ ಸೋಮವಾರ ರಾತ್ರಿ ನಡೆದಿದೆ. ಲಷ್ಕರ್ ಮೊಹಲ್ಲಾದ ಸತ್ತರ್‍ಬ್ಲಾಕ್ ನಿವಾಸಿ, ಕ್ಯಾಂಟಿನ್‍ವೊಂದರಲ್ಲಿ ಸಪ್ಲೈಯರ್ ಕೆಲಸ ಮಾಡುತ್ತಿದ್ದ ಹರೀಶ್(30) ಮೃತ ವ್ಯಕ್ತಿ.

ಸೋಮವಾರ ರಾತ್ರಿ ಕುಡಿದು ಮನೆಗೆ ಬಂದ ಆತ, ತಾಯಿ ಶಾಂತಾಬಾಯಿಯೊಂದಿಗೆ ಜಗಳವಾಡಿದ್ದಾನೆ. ಇದರಿಂದ ಬೇಸರಗೊಂಡ ತಾಯಿ ಸಮೀಪವೇ ಇದ್ದ ಮಗಳ ಮನೆಗೆ ಹೋಗಿದ್ದಾರೆ. ಮಂಗಳವಾರ ಬೆಳಗ್ಗೆ ಮನೆಗೆ ಬಂದ ಶಾಂತಾಬಾಯಿ, ಮನೆ ಬಾಗಿಲು ತೆಗೆಯದೇ ಇದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡಿದ್ದಾರೆ. ಅಕ್ಕಪಕ್ಕದವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಹರೀಶ್ ಮನೆಯ ಜಂತಿಗೆ ಟವೆಲ್‍ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿ ಆತ್ಮಹತ್ಯೆ: ನೇಣು ಹಾಕಿಕೊಂಡು ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಬಿಎಂಶ್ರೀ ನಗರದಲ್ಲಿ  ಮಂಗಳವಾರದಂದು ಈ ಘಟನೆ ಸಂಭವಿಸಿದೆ.

ಮೇಟಗಳ್ಳಿಯ ಬಿಎಂಶ್ರೀ ನಗರದ ನಿವಾಸಿ ರಮೇಶ ಅವರ ಪುತ್ರಿ ನಂದಿನಿ(24) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ತಂದೆ-ತಾಐಇ ಇಬ್ಬರೂ ಸಂಬಂಧಿಕರ ಅಂತ್ಯಕ್ರಿಯೆಗೆಂದು ಕೆ.ಆರ್. ಪೇಟೆಗೆ ತೆರಳಿದ್ದಾಗ ಮನೆಯಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ನೆರೆಹೊರೆಯವರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಮೇಟಗಳ್ಳಿ ಠಾಣೆ ಇನ್ಸ್‍ಪೆಕ್ಟರ್‍ ಸುನಿಲ್ ಕುಮಾರ್, ಸಬ್‍ ಇನ್ಸ್‍ಪೆಕ್ಟರ್ ಕುಮಾರ್ ಹಾಗೂ ಸಿಬ್ಬಂದಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೋಷಕರು ಬಂದ ನಂತರ ನೃತದೇಹವನ್ನು ಮೈಸೂರು ಮೆಡಿಕಲೆ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರಕ್ಕೆ ಸ್ಥಳಾಂತರಿಸಿದ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Leave a Reply

comments

Related Articles

error: