ಪ್ರಮುಖ ಸುದ್ದಿ

ಪತ್ರಕರ್ತ ರವಿ ಬೆಳಗೆರೆಗೆ ಜಾಮೀನು ಮಂಜೂರು

ಬೆಂಗಳೂರು,ಡಿ.21-ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಆರೋಪ ಎದುರಿಸುತ್ತಿರುವ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆಗೆ ಷರುತ್ತು ಬದ್ಧ ಜಾಮೀನು ದೊರೆತಿದೆ.

ಬೆಂಗಳೂರಿನ 65ನೇ ಸಿಟಿಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಬಿ.ಮಧುಸೂಧನ್ ಅವರು ರವಿ ಬೆಳಗೆರೆ ಅವರಿಗೆ ಜಾಮೀನು ನೀಡಿ ಗುರುವಾರ ಆದೇಶ ಹೊರಡಿಸಿದರು.

ಇಬ್ಬರ ಶ್ಯೂರಿಟಿ, ಒಂದು ಲಕ್ಷ ರೂ. ಬಾಂಡ್ ಸಲ್ಲಿಸಬೇಕು. ತನಿಖೆಗೆ ಸಹಕರಿಸಬೇಕು ಎಂದು ಷರತ್ತುಗಳನ್ನು ನ್ಯಾಯಾಧೀಶ ಮದುಸೂಧನ್ ವಿಧಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಈಗಾಗಲೇ ರವಿ ಬೆಳಗೆರೆ ಅವರಿಗೆ ಎರಡು ಬಾರಿ ಮಧ್ಯಂತರ ಜಾಮೀನು ನೀಡಲಾಗಿತ್ತು.

ಅನಾರೋಗ್ಯದಿಂದ ಬಳಲುತ್ತಿರುವ ರವಿ ಬೆಳಗೆರೆ ಅವರನ್ನು ಗುರುವಾರ ಬೆಳಿಗ್ಗೆ ಜಯದೇವ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. (ವರದಿ-ಎಂ.ಎನ್)

Leave a Reply

comments

Related Articles

error: