ಕರ್ನಾಟಕ

ಕೆ.ಎಂ.ಗಣೇಶ್ ರಾಜಕೀಯ ಅಸ್ತಿತ್ವಕ್ಕಾಗಿ ಹವಣಿಸುತ್ತಿದ್ದಾರೆ : ಕಾವೇರಮ್ಮ ಸೋಮಣ್ಣ ಆರೋಪ

ರಾಜ್ಯ(ಮಡಿಕೇರಿ) ಡಿ.21 :-  ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಗೆದ್ದು ನಗರಸಭಾ ಸದಸ್ಯರಾಗಿ ಆಯ್ಕೆಯಾದ ಕೆ.ಎಂ.ಗಣೇಶ್ ಅವರು ತಮ್ಮ ವೈಯುಕ್ತಿಕ ಲಾಭಕ್ಕಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಇದೀಗ ಆ ಪಕ್ಷದಲ್ಲಿ ಅಸ್ತಿತ್ವ ಕಂಡುಕೊಳ್ಳುವುದಕ್ಕಾಗಿ ನಗರಸಭೆಯ ಆಡಳಿತದ ವಿರುದ್ಧ ವಿನಾಕಾರಣ ಟೀಕೆ ಮಾಡುವ ಮೂಲಕ ಮತ್ತೊಂದು ಪ್ರಹಸನಕ್ಕೆ ಕೈ ಹಾಕಿದ್ದಾರೆ ಎಂದು ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಆರೋಪಿಸಿದ್ದಾರೆ.

ಪ್ರತಿಕಾ ಹೇಳಿಕೆ ನೀಡಿರುವ ಅವರು ನಗರದ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯಕ್ಕೆಂದು ರೂ.9 ಲಕ್ಷ ಬಿಡುಗಡೆಯಾಗಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಉಳಿದ ವಾರ್ಡ್‍ಗಳ ರಸ್ತೆಯನ್ನು ದುರಸ್ತಿ ಪಡಿಸಲು ಕ್ರಿಯಾ ಯೋಜನೆ ತಯಾರಾಗಿದ್ದು, ತಾಂತ್ರಿಕ ಅನುಮೋದನೆ ಪೂರ್ಣಗೊಂಡಿದೆ. ಟೆಂಡರ್ ಪ್ರಕ್ರಿಯೆ ಈ ವಾರದಲ್ಲಿ ಅಂತಿಮಗೊಂಡು ನಂತರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.  ವಾಸ್ತವತೆ ಹೀಗಿದ್ದರೂ ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಹವಣಿಸುತ್ತಿರುವ ಕೆ.ಎಂ.ಗಣೇಶ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಅರ್ಥಹೀನ ಹೇಳಿಕೆ ನೀಡುತ್ತಿರುವ ಗಣೇಶ್ ಅವರಿಗೆ  ನನ್ನ ರಾಜೀನಾಮೆಯನ್ನು ಕೇಳುವ ಯಾವ ನೈತಿಕತೆಯೂ ಇಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಮೊದಲು ಅವರು ಯಾವ ಪಕ್ಷದಲ್ಲಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಬೇಕಾಗಿದೆ. ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ಎಂದು ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರಾಗಿರುವುದು ಯಾಕೆ ಎಂದು ಪ್ರಶ್ನಿಸಿರುವ ಅವರು, ಗಣೇಶ್ ಮೊದಲು ನಗರಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: