ಸುದ್ದಿ ಸಂಕ್ಷಿಪ್ತ
ಡಿ.25ಕ್ಕೆ ಮೈಸೂರು ಜಿಲ್ಲಾ ಅಧಿಕೃತ ಪತ್ರಿಕಾ ಪ್ರತಿನಿಧಿಗಳ ಸಂಘದ ವಾರ್ಷಿಕೋತ್ಸವ
ಮೈಸೂರು,ಡಿ. 22 : ಮೈಸೂರು ಜಿಲ್ಲಾ ಅಧಿಕೃತ ಪತ್ರಿಕಾ ಪ್ರತಿನಿಧಿಗಳ ಸಂಘದ 2ನೇ ವಾರ್ಷಿಕೋತ್ಸವವು ಡಿ.25ರ ಬೆಳಗ್ಗೆ 10.30ಕ್ಕೆ ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಯೋಜಿಸಿದೆ.
ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಶಾಸಕ ವಾಸು, ಸಂಘದ ಗೌರವಾಧ್ಯಕ್ಷ ಬಿ.ಎನ್.ನಾಯಕ್, ಅಧ್ಯಕ್ಷ ಜನಾರ್ಧನ್ ಇರುವರು.
ವಾರ್ಷಿಕೋತ್ಸವ ನಿಮಿತ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಕ್ಯಾಲೆಂಡರ್ ಬಿಡುಗಡೆಯನ್ನು ಆಯೋಜಿಸಿದೆ. (ಕೆ.ಎಂ.ಆರ್)