Uncategorized

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಹಾಗೂ ತಿದ್ದುಪಡಿಗೆ ಅವಕಾಶ

ರಾಜ್ಯ( ಮಡಿಕೇರಿ) ಡಿ.22 :- 2018ರ ಜ.1 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 19 ವರ್ಷ ಮೇಲ್ಪಟ್ಟ ನಾಗರೀಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ಈಗಾಗಲೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿಗೆ ಅವಕಾಶವಿದೆ.

ಡಿಸೆಂಬರ್, 29 ರವರೆಗೆ ತಮ್ಮ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ತಾಲೂಕು ಕಚೇರಿಗೆ ನಿಗದಿತ ನಮೂನೆಯಲ್ಲಿ (ನಮೂನೆ-6 ಸೇರ್ಪಡೆ, ನಮೂನೆ-7 ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ನಮೂನೆ-8 ತಿದ್ದುಪಡಿಗಾಗಿ ಮತ್ತು ನಮೂನೆ-8ಎ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ) ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶ್ರೀವಿದ್ಯಾ  ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: